ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ: ಭಾರತ ಹಾಗೂ ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ಫೆಬ್ರವರಿ 7 ರಿಂದ ಮಾರ್ಚ್‌ 8ರವರೆಗೆ ನಡೆಯಲಿರುವ 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೆ 15 ಸದಸ್ಯರ ಭಾರತ ತಂಡವನ್ನು ಅಜಿತ್‌ ಅಗರ್ಕರ್‌ ನೇತೃತ್ವದ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿಯು ಶನಿವಾರ ಘೋಷಿಸಿದೆ.

ಕಳಪೆ ಫಾರ್ಮ್‌ನಿಂದ ಬಳಲುತ್ತಿದ್ದ ಆರಂಭಿಕ ಬ್ಯಾಟ್ಸ್‌ಮನ್‌ ಶುಭಮನ್‌ ಗಿಲ್‌ ಹಾಗೂ ವಿಕೆಟ್‌ ಕೀಪರ್‌ ಜಿತೇಶ್‌ ಶರ್ಮಾ ಅವರನ್ನು ತಂಡದಿಂದ ಕೈಬಿಡಲಾಗಿದೆ. ಸಂಜು ಸ್ಯಾಮ್ಸನ್‌ ಅವರನ್ನು ಪ್ರಮುಖ ವಿಕೆಟ್‌ ಕೀಪರ್‌ ಆಗಿ ಆಯ್ಕೆ ಮಾಡಲಾಗಿದ್ದರೆ, ಸ್ಫೋಟಕ ಬ್ಯಾಟ್ಸ್‌ಮನ್‌ ಇಶಾನ್‌ ಕಿಶನ್‌ ದೀರ್ಘಾವಧಿ ಬಳಿಕ ತಂಡಕ್ಕೆ ಮರಳಿದ್ದು, ಎರಡನೇ ವಿಕೆಟ್‌ ಕೀಪರ್‌ ಆಗಿ ಸ್ಥಾನ ಪಡೆದಿದ್ದಾರೆ. ಆಲ್‌ರೌಂಡರ್‌ ಅಕ್ಷರ್‌ ಪಟೇಲ್‌ಗೆ ಉಪ ನಾಯಕತ್ವದ ಜವಾಬ್ದಾರಿ ನೀಡಲಾಗಿದೆ.

ಕಳೆದ ಏಷ್ಯಾ ಕಪ್‌ ಟೂರ್ನಿಯಿಂದ ಇಲ್ಲಿಯವರೆಗೂ ಸತತ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ್ದ ಶುಭಮನ್‌ ಗಿಲ್‌ ಅವರನ್ನು ತಂಡದಿಂದ ಹೊರಗಿಡಲು ಪ್ರಮುಖ ಕಾರಣವಾಗಿದೆ. ಮತ್ತೊಂದೆಡೆ, ಸೈಯದ್‌ ಮುಷ್ತಾಕ್‌ ಅಲಿ ಟ್ರೋಫಿ ಟೂರ್ನಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದ ವಿಕೆಟ್‌ ಕೀಪರ್‌ ಇಶಾನ್‌ ಕಿಶನ್‌ಗೆ ರಾಷ್ಟ್ರೀಯ ತಂಡದಲ್ಲಿ ಮತ್ತೆ ಅವಕಾಶ ಒದಗಿಸಲಾಗಿದೆ.

2026ರ ಪುರುಷರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೆ ಭಾರತ ತಂಡ ಹೀಗಿದೆ:

ಸೂರ್ಯಕುಮಾರ್‌ ಯಾದವ್‌ (ನಾಯಕ), ಅಭಿಷೇಕ್‌ ಶರ್ಮಾ, ಸಂಜು ಸ್ಯಾಮ್ಸನ್‌ (ವಿಕೆಟ್‌ ಕೀಪರ್‌), ತಿಲಕ್‌ ವರ್ಮಾ, ಹಾರ್ದಿಕ್‌ ಪಾಂಡ್ಯ, ಶಿವಂ ದುಬೆ, ಅಕ್ಷರ್‌ ಪಟೇಲ್‌ (ಉಪ ನಾಯಕ), ರಿಂಕು ಸಿಂಗ್‌, ಜಸ್‌ಪ್ರೀತ್‌ ಬುಮ್ರಾ, ಹರ್ಷಿತ್‌ ರಾಣಾ, ಅರ್ಷದೀಪ್‌ ಸಿಂಗ್‌, ಕುಲ್ದೀಪ್‌ ಯಾದವ್‌, ವರುಣ್‌ ಚಕ್ರವರ್ತಿ, ವಾಷಿಂಗ್ಟನ್‌ ಸುಂದರ್‌, ಇಶಾನ್‌ ಕಿಶನ್‌ (ವಿಕೆಟ್‌ ಕೀಪರ್‌).

Edited By :
PublicNext

PublicNext

20/12/2025 02:49 pm

Cinque Terre

8.71 K

Cinque Terre

1