ಫೆಬ್ರವರಿ 7 ರಿಂದ ಆರಂಭವಾಗಲಿರುವ ಟಿ-20 ವಿಶ್ವಕಪ್‌ಗಾಗಿ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ. ಈ ಬಾರಿಯ ತಂಡದ ಆಯ್ಕೆಯಲ್ಲಿ ಹಲವು ಅಚ್ಚರಿಯ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.
ಯಶಸ್ವಿ ಜೈಸ್ವಾಲ್‌ಗೆ ಮತ್ತೊಮ್ಮೆ ಅನ್ಯಾಯವಾಗಿದೆ ಎಂಬ ಚರ್ಚೆ ಹುಟ್ಟುಹಾಕಿದೆ. ಜೊತೆಗೆ, ಶುಬ್ಮನ್ ಗಿಲ್ ಮತ್ತು ಜಿತೇಶ್ ಶರ್ಮಾ ಅವರನ್ನು ಕೈಬಿಟ್ಟು, ಇಶಾನ್ ಕಿಶನ್ ಹಾಗೂ ರಿಂಕು ಸಿಂಗ್‌ಗೆ ಮರಳಿ ಅವಕಾಶ ನೀಡಿರುವುದು ಪ್ರಮುಖ ಹೈಲೈಟ್ ಆಗಿದೆ.
ಪ್ರಮುಖ ಬದಲಾವಣೆಗಳು ಮತ್ತು ಮರುಪ್ರವೇಶ
ಆಯ್ಕೆ ಸಮಿತಿ ಈ ಬಾರಿ ಕೆಲವು ಪ್ರಮುಖ ಆಟಗಾರರಿಗೆ ಶಾಕ್ ನೀಡಿದೆ. ಯುವ ಆರಂಭಿಕ ಆಟಗಾರ ಶುಬ್ಮನ್ ಗಿಲ್ ಮತ್ತು ವಿಕೆಟ್ ಕೀಪರ್ ಜಿತೇಶ್ ಶರ್ಮಾ ಅವರನ್ನು ತಂಡದಿಂದ ಕೈಬಿಡಲಾಗಿದೆ. ಈ ನಿರ್ಧಾರ ಅಚ್ಚರಿ ಮೂಡಿಸಿದೆ. ಮತ್ತೊಂದೆಡೆ, ಫಾರ್ಮ್ ಕಳೆದುಕೊಂಡು ತಂಡದಿಂದ ಹೊರಗುಳಿದಿದ್ದ ಇಶಾನ್ ಕಿಶನ್ ಹಾಗೂ ಉತ್ತಮ ಫಿನಿಷರ್ ಆಗಿ ಗುರುತಿಸಿಕೊಂಡಿರುವ ರಿಂಕು ಸಿಂಗ್‌ಗೆ ಮತ್ತೆ ಅವಕಾಶ ಕಲ್ಪಿಸಲಾಗಿದೆ.
ಇಶಾನ್ ಕಿಶನ್ ಇತ್ತೀಚೆಗೆ ನಡೆದ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಆಯ್ಕೆ ಸಮಿತಿಯ ಗಮನ ಸೆಳೆದಿದ್ದರು. ಈ ಪ್ರದರ್ಶನವನ್ನು ಪರಿಗಣಿಸಿ, ಜಿತೇಶ್ ಶರ್ಮಾ ಬದಲಿಗೆ ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡಲಾಗಿದೆ. ಸಂಜು ಸ್ಯಾಮ್ಸನ್ ಅವರ ಬ್ಯಾಕಪ್ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ರಿಂಕು ಸಿಂಗ್ ಅವರನ್ನು ಅವರ ಪರಿಣಿತ ಫಿನಿಶಿಂಗ್ ಜವಾಬ್ದಾರಿಗಾಗಿ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಭಾರತ ತಂಡದ ಸಂಪೂರ್ಣ ಪಟ್ಟಿ
ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್ (ಉಪ ನಾಯಕ), ಇಶಾನ್ ಕಿಶನ್, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬೂಮ್ರಾ, ಅರ್ಷ್‌ದೀಪ್ ಸಿಂಗ್, ಹರ್ಷಿತ್ ರಾಣಾ.
PublicNext
20/12/2025 03:05 pm