ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಬಿಡಿಎಯಿಂದ 50 ಕೋಟಿ ರೂ. ಮೌಲ್ಯದ ಆಸ್ತಿ ವಶ: ಅಕ್ರಮಕ್ಕೆ ಬ್ರೇಕ್!

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಕಾರ್ಯಾಚರಣೆಯಲ್ಲಿ ಒ.ಎಂ.ಬಿ.ಆರ್. ಬಡಾವಣೆಯಲ್ಲಿ ಸುಮಾರು ರೂ. 50 ಕೋಟಿ ಆಸ್ತಿಯನ್ನು ವಶಪಡಿಸಿಕೊಂಡಿದೆ.

ಬಾಣಸವಾಡಿ ಗ್ರಾಮದ ಸರ್ವೆ ನಂ. 227/2 ಮತ್ತು 227/4ರಲ್ಲಿ 1 ಎಕರೆ 24 ಗುಂಟೆ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಾಣಗಳನ್ನು ತೆರವುಗೊಳಿಸಿ, ಸುಮಾರು 50 ಕೋಟಿ ಬೆಲೆ ಬಾಳುವ ಪ್ರದೇಶವನ್ನು ಪ್ರಾಧಿಕಾರವು ವಶಪಡಿಸಿಕೊಂಡಿತು.

ಈ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕರು, ಅಭಿಯಂತರ ಅಧಿಕಾರಿ-3, ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಇವರುಗಳನ್ನು ಒಳಗೊಂಡಂತೆ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ನೆರವೇರಿಸಲಾಯಿತು.

Edited By :
PublicNext

PublicNext

20/12/2025 10:15 pm

Cinque Terre

7.22 K

Cinque Terre

0