ಮಂಗಳೂರು : ಭಾರತೀಯ ಕ್ರಿಕೆಟ್ ತಂಡದ ಪ್ರಮುಖ ವೇಗದ ಬೌಲರ್ ಮೊಹಮ್ಮದ್ ಶಮಿ ಅವರು ಕ್ರಿಕೆಟ್ ಪಂದ್ಯಾವಳಿಯೊಂದರಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ್ದು, ಅಭಿಮಾನಿಗಳು ಅವರಿಗೆ ಅದ್ದೂರಿ ಸ್ವಾಗತ ಕೋರಿದರು.
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಶಮಿ ಅವರನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳು ಜಮಾಯಿಸಿದ್ದರು. ತಮ್ಮ ನೆಚ್ಚಿನ ಆಟಗಾರನನ್ನು ಕಂಡು ಹರ್ಷೋದ್ಗಾರ ಮಾಡಿದ ಅಭಿಮಾನಿಗಳು, ಶಮಿಗೆ ಭವ್ಯ ಸ್ವಾಗತ ನೀಡಿದರು.
ಶಮಿ ಅವರು ನಾಳೆ ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ನಡೆಯಲಿರುವ ಅದ್ದೂರಿ ಕ್ರಿಕೆಟ್ ಪಂದ್ಯಾಟದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
PublicNext
20/12/2025 10:51 pm
LOADING...