ಬೆಂಗಳೂರು: “ಬಿಜೆಪಿಗರು ಗಾಂಧಿ ಪ್ರತಿಮೆ ಮುಂದೆ ನಿಂತು ಹೋರಾಟ ಮಾಡುವ ಹಕ್ಕನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಬಿಜೆಪಿ ನಾಯಕರು ಹಾಗೂ ಶಾಸಕರು ಇನ್ನು ಮುಂದೆ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡಬಾರದು" ಎಂದು ಡಿಸಿಎಂ ಡಿಕೆಶಿ ಬಿಜೆಪಿಗರಿಗೆ ಸವಾಲು ಹಾಕಿದ್ದಾರೆ.
ಬಡವರಿಗೆ ಉದ್ಯೋಗ ನೀಡುವ ಯೋಜನೆಯ ಹೆಸರಿನಿಂದ ನೀವು ಗಾಂಧೀಜಿ ಅವರ ಹೆಸರು ತೆಗೆಯುತ್ತಿದ್ದೀರಿ ಎಂದರೆ ನೀವು ದೇಶದ್ರೋಹಿಗಳು. ಬೇರೆ ದೇಶದ ನಾಯಕರು ನಮ್ಮ ದೇಶಕ್ಕೆ ಬಂದರೆ ಮೊದಲು ಅವರು ಗಾಂಧಿ ಸಮಾಧಿಗೆ ಹೋಗಿ ಪೂಜೆ ಮಾಡುತ್ತಾರೆ. ಗಾಂಧಿ ಭಾವಚಿತ್ರಕ್ಕೆ ನಮಿಸುತ್ತಾರೆ. ಆದರೆ, ಗಾಂಧಿ ಅವರ ಹೆಸರು ತೆಗೆಯುವ ಮೂಲಕ ಮತ್ತೊಮ್ಮೆ ಗಾಂಧಿ ಅವರನ್ನು ಕೊಲ್ಲುತ್ತಿದ್ದೀರೆಂದು ಫ್ರೀಡಂ ಪಾರ್ಕ್ ನಲ್ಲಿ ಡಿಕೆಶಿ ಹೇಳಿದ್ದಾರೆ.
PublicNext
20/12/2025 10:54 pm
LOADING...