ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಅವರ ಪತ್ನಿಗೆ 17 ವರ್ಷ ಜೈಲು ಶಿಕ್ಷೆ

ಇಸ್ಲಾಮಾಬಾದ್: ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಅವರ ಪತ್ನಿಗೆ 17 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ವರದಿಯಾಗಿದೆ.

ಪಿಟಿಐ ವರದಿಯ ಪ್ರಕಾರ, ಸ್ಥಳೀಯ ಮಾಧ್ಯಮಗಳು ನೀಡಿರುವ ಮಾಹಿತಿ ಅನ್ವಯ, ತೋಶಖಾನಾ-2 ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ನ್ಯಾಯಾಲಯವೊಂದು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿ ಅವರಿಗೆ ತಲಾ 17 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಪ್ರಕರಣದ ವಿವರ ಮತ್ತು ಹಿನ್ನೆಲೆ

ಈ ಪ್ರಕರಣವು 2021ರಲ್ಲಿ ಸೌದಿ ಅರೇಬಿಯಾದಿಂದ ದಂಪತಿಗಳು ಪಡೆದ ಸರ್ಕಾರಿ ಉಡುಗೊರೆಗಳಲ್ಲಿ ನಡೆದ ವಂಚನೆ ಆರೋಪಕ್ಕೆ ಸಂಬಂಧಿಸಿದೆ. ಖಾನ್ ಅವರನ್ನು ಜೈಲಿನಲ್ಲಿ ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ ಎಂಬ ಆರೋಪದ ಮೇಲೆ ಪಾಕಿಸ್ತಾನ ಸರ್ಕಾರದ ವಿರುದ್ಧ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಈ ತೀರ್ಪು ಹೊರಬಿದ್ದಿದೆ.

Edited By : Vijay Kumar
PublicNext

PublicNext

21/12/2025 07:14 am

Cinque Terre

5.35 K

Cinque Terre

0