ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ʼರಾಷ್ಟ್ರೀಯ ಪಲ್ಸ್ ಪೋಲಿಯೊʼ; ಬೈಕ್ ಜಾಗೃತಿ ಜಾಥಾ

ಬೆಂಗಳೂರು: ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕ ಆಸ್ಪತ್ರೆ ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕೃಷ್ಣರಾಜಪುರ ಹಾಗೂ ಹ್ಯುಮಾನಿಟಿ ಕಾಲ್ಸ್ ಬೈಕ್ ರೈಡರ್ಸ್ ಸಹಯೋಗದೊಂದಿಗೆ 2025 ರ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಕುರಿತು ಬೈಕ್ ರ್ಯಾಲಿ ಮೂಲಕ ಜಾಗೃತಿ ಜಾಥಾ ವನ್ನು ಬೆಂಗಳೂರು ಪೂರ್ವ ನಗರಪಾಲಿಕೆ ಅಪರ ಆಯುಕ್ತರಾದ ಲೋಖಂಡೆ ಸ್ನೇಹಲ್ ಸುಧಾಕರ್ ಮತ್ತು ಜಂಟಿ ಆಯುಕ್ತರಾದ ಡಾ. ಸುಧಾ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿ, ಆರೋಗ್ಯ ಸೇವೆಗಳು ದೇಶದ ಕಟ್ಟಕಡೆಯ ನಾಗರಿಕರಿಗೂ ತಲುಪುವಂತೆ ಕರ್ತವ್ಯ ನಿರ್ವಹಿಸಬೇಕೆಂದರು.

ಪಲ್ಸ್ ಪೋಲಿಯೊ ಬೈಕ್ ಜಾಗೃತಿ ಜಾಥಾದ ಮುಂದಾಳತ್ವ ವಹಿಸಿದ್ದ ಬೆಂಗಳೂರು ಪೂರ್ವ ನಗರ ಪಾಲಿಕೆ ಆರೋಗ್ಯ ಅಧಿಕಾರಿಗಳಾದ ಡಾ. ಸವಿತಾ ಅವರು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸೂಕ್ಷ್ಮ ಕ್ರಿಯಾ ಯೋಜನೆಯನ್ನು ವಿವರಿಸಿದರು.

ಬೈಕ್ ಜಾಥಾ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಬೆಂಗಳೂರು ಪೂರ್ವ ನಗರ ಪಾಲಿಕೆಯ ನೋಡಲ್ ಅಧಿಕಾರಿ ಡಾ. ಶಿವಪ್ಪ , ಬೆಂಗಳೂರು ಪೂರ್ವ ನಗರ ಪಾಲಿಕೆ ಆರೋಗ್ಯ ವೈದ್ಯಾಧಿಕಾರಿ ಡಾ. ವಿಶ್ವೇಶ್ವರಯ್ಯ, ಕೃಷ್ಣರಾಜಪುರ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಲೀಲಾ ಆರ್. ಪಿ., ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ. ನಿಸರ್ಗ , ಹ್ಯುಮಾನಿಟಿ ಕಾಲ್ಸ್ ಬೈಕ್ ರೈಡರ್ ನ ಮುಖಂಡರಾದ ಮನು, ಆರೋಗ್ಯ ಮೇಲ್ವಿಚಾರಕರಾದ ರಾಘವೇಂದ್ರ, ಹನುಮಂತಪ್ಪ, ಸಂಜಯ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಗುರುರಾಜ್ ಮತ್ತು ಶ್ರೀಶೈಲ ಕನ್ನಾಳ್, ಆರೋಗ್ಯ ಕಾರ್ಯಕ್ರಮಗಳ ವ್ಯವಸ್ಥಾಪಕರಾದ ಪ್ರಜ್ವಲ್ ಮತ್ತು ವಿಜಯಲಕ್ಷ್ಮಿ ಸೇರಿದಂತೆ ಕೃಷ್ಣರಾಜಪುರ ಸಾರ್ವಜನಿಕ ಆಸ್ಪತ್ರೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳು ಮತ್ತು ಸಿಬ್ಬಂದಿ, ಹ್ಯುಮಾನಿಟಿ ಕಾಲ್ಸ್ ತಂಡದ ಬೈಕ್ ರೈಡರ್ ಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.

Edited By : Manjunath H D
PublicNext

PublicNext

21/12/2025 10:48 am

Cinque Terre

3.62 K

Cinque Terre

0