ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು: ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಬಾವುಗುತ್ತು ಕಿರಣ್ ಆಳ್ವ ಅವಿರೋಧ ಆಯ್ಕೆ

ಕಾಪು : ಕಾಪು ಪುರಸಭೆ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಬಾವುಗುತ್ತು ಕಿರಣ್ ಆಳ್ವ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶನಿವಾರ ಪುರಸಭೆ ಆಡಳಿತ ಕಚೇರಿಯಲ್ಲಿ ನಡೆದ ಸ್ಥಾಯಿ ಸಮಿತಿ ಸದಸ್ಯರ ಸಭೆಯಲ್ಲಿ ಆಡಳಿತ ಪಕ್ಷ ಬಿಜೆಪಿಯ ಸದಸ್ಯ ಕಿರಣ್ ಆಳ್ವ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಎರಡನೇ ಅವಧಿಗೆ ಪುರಸಭೆ ಸದಸ್ಯರಾಗಿ ಚುನಾಯಿತರಾಗಿರುವ ಅವರು ಬಿಜೆಪಿಯಲ್ಲಿ ಸಕ್ರಿಯರಾಗಿದ್ದು ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕರ್ತರಾಗಿಯೂ ಗುರುತಿಸಿಕೊಂಡಿದ್ದಾರೆ.

ನೂತನ ಸ್ಥಾಯಿ ಸಮಿತಿಗೆ ಆಡಳಿತ ಪಕ್ಷ ಬಿಜೆಪಿಯಿಂದ ಅರುಣ್ ಶೆಟ್ಟಿ ಪಾದೂರು, ಕಿರಣ್ ಆಳ್ವ, ರತ್ನಾಕರ ಶೆಟ್ಟಿ, ಶೈಲೇಶ್ ಅಮೀನ್, ನಿತಿನ್ ಕುಮಾರ್, ನಾಗೇಶ್ ಮತ್ತು ಸರಿತಾ ಮತ್ತು ವಿಪಕ್ಷ ಕಾಂಗ್ರೆಸ್ ನಿಂದ ಫರ್ಜಾನ, ಶೋಭಾ ಬಂಗೇರ, ರೂಫಸ್ ಶಾಬು ಮತ್ತು ಸತೀಶ್ಚಂದ್ರ ಅವರನ್ನು ನ. 24ರಂದು ನಡೆದಿದ್ದ ಸಾಮಾನ್ಯ ಸಭೆಯಲ್ಲಿ ಆಯ್ಕೆ ಮಾಡಲಾಗಿತ್ತು.

ಪುರಸಭಾ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷೆ ಸರಿತಾ ಶಿವಾನಂದ್, ಪ್ರಭಾರ ಮುಖ್ಯಾಧಿಕಾರಿ ಶಶಿಕಲಾ ಉಪಸ್ಥಿತರಿದ್ದರು.

Edited By :
PublicNext

PublicNext

21/12/2025 12:17 pm

Cinque Terre

5.43 K

Cinque Terre

0

ಸಂಬಂಧಿತ ಸುದ್ದಿ