ಹಡಗಲಿ : ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಹೊಳಗುಂದಿ ಗ್ರಾಮದ ಬಳಿ ಕರುಗಳ ಮೇಲೆ ಚಿರತೆ ದಾಳಿ ನಡೆಸಿ ಕೊಂದಿದೆ.
ಗ್ರಾಮದ ಹೊರವಲಯದ ತೋಟದಲ್ಲಿ ಕಟ್ಟಿದ್ದ ಕರುಗಳ ಮೇಲೆ ಚಿರತೆ ದಾಳಿ ನಡೆಸಿದೆ. ಕಳೆದ ಎರಡು ದಿನದಿಂದ ನಿಜಲಿಂಗಪ್ಪ ನಗರ, ದೇವಸ್ಥಾನ ಸುತ್ತಮುತ್ತಲ ಪ್ರದೇಶದಲ್ಲಿ ಚಿರತೆ ಹಾವಳಿ ಹೆಚ್ಚಿದೆ. ಕಳೆದ 15 ದಿನಗಳ ಹಿಂದೆ ಕುರಿಯನ್ನು ಚಿರತೆ ಕೊಂದಿತ್ತು. ರಾತ್ರಿ ವೇಳೆ ಗ್ರಾಮದ ಬಳಿಯೇ ಚಿರತೆ ಓಡಾಡುತ್ತಿದೆ. ಸಾರ್ವಜನಿಕರು ಮನೆಯಿಂದ ಹೊರಬರಲು ಭಯಪಡುವ ಸ್ಥಿತಿ ಇದೆ. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಹಾವಳಿ ನಿಯಂತ್ರಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
Kshetra Samachara
19/01/2026 10:56 am
LOADING...