ಹೊಸಪೇಟೆ : ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಸಾವನ್ನಪ್ಪಿದೆ. ಈ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಅತೀ ವೇಗವಾಗಿ ಓಡಾಟ ನಡೆಸುತ್ತವೆ. ಈ ವೇಳೆ ಚಿರತೆ ಕೂಡಾ ರಸ್ತೆ ದಾಟೋದಕ್ಕೆ ಮುಂದಾಗಿದೆ. ಇದ್ರಿಂದ ವಾಹನ ಬಲವಾಗಿ ಗುದ್ದಿದ್ದಕ್ಕೆ ಚಿರತೆ ಸ್ಥಳದಲ್ಲೇ ಪ್ರಾಣ ಬಿಟ್ಟಿದೆ. ಘಟನಾ ಸ್ಥಳಕ್ಕೆ ಮರಿಯಮ್ಮನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
19/01/2026 09:51 pm
LOADING...