ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶ್ರೀರಂಗಪಟ್ಟಣ : ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಉದ್ಘಾಟನೆ

ಮೈಸೂರು: ಶ್ರೀರಂಗಪಟ್ಟಣ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಶಾಸಕ ರಮೇಶ ಬಂಡಿ ಸಿದ್ದೇಗೌಡರವರು ಉದ್ಘಾಟಿಸಿದರು..

ಬಳಿಕ ಮಾತನಾಡಿದ ಅವರು, ಇಂದಿನ ಯುವಕ, ಯುವತಿಯರಿಗೆ ಉದ್ಯೋಗ ಪೂರಕ ತರಬೇತಿಗಳನ್ನು ನೀಡುವಂತ ಕೆಲಸ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡಲಿ. 12 ವರ್ಷದಿಂದ ಗ್ರಾಮೀಣ ಭಾಗದಲ್ಲಿ ಉತ್ತಮ ಕೆಲಸ ಮಾಡುತ್ತಾ ಬಂದಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ನನ್ನಿಂದ ಸಾಧ್ಯವಾದಷ್ಟು ಸಹಕಾರ ನೀಡುತ್ತೇನೆ ಎಂದು ತಿಳಿಸಿದರು.

ಮಹಿಳೆಯರು ಆರೋಗ್ಯವಾಗಿದ್ದರೆ ಕುಟುಂಬ ಚೆನ್ನಾಗಿರುತ್ತದೆ. ಮಹಿಳೆಯರು ತಮ್ಮ ಆರೋಗ್ಯ ಬಲಪಡಿಸಿ ಮನೆಯ ಸದಸ್ಯರ ಆರೋಗ್ಯ ನೋಡಿಕೊಳ್ಳಬೇಕು. ಮಹಿಳೆಯರಿಗಾಗಿ ಅನೇಕ ಕಾರ್ಯಕ್ರಮಗಳು ಸರ್ಕಾರದಿಂದ ನೀಡಿದ್ದು ಸದುಪಯೋಗ ಪಡೆದುಕೊಳ್ಳಲಿ ಎಂದರು.

ಆಶಾಲತಾ ಪುಟ್ಟೇಗೌಡರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕಿ ಮಮತಾ ರಾವ್ ಮಾತನಾಡಿ, ಜ್ಞಾನವಿಕಾಸ ಕಾರ್ಯಕ್ರಮದ ಸದುಪಯೋಗ ಹಾಗೂ ಸದ್ಬಳಕೆ ಮಾಡಿಕೊಳ್ಳುವ ಬಗ್ಗೆ ವಾತ್ಸಲ್ಯ ಕಾರ್ಯಕ್ರಮದ ಪ್ರಯೋಜನದ ಬಗ್ಗೆ ಜೀವನದ ಮೌಲ್ಯಗಳ ಬಗ್ಗೆ ಸದಸ್ಯರಿಗೆ ಪ್ರೇರಣೆ ನೀಡಿದರು. ಜ್ಞಾನ ವಿಕಾಸ ಕಾರ್ಯಕ್ರಮಗಳಾದ ಆರೋಗ್ಯ ಮತ್ತು ನೈರ್ಮಲ್ಯ, ಮಕ್ಕಳ ಶಿಕ್ಷಣ, ಮಹಿಳೆಯರ ಹಕ್ಕು ಮತ್ತು ಕಾನೂನು ಸರ್ಕಾರಿ ಯೋಜನೆಗಳು ಗ್ರಂಥಾಲಯಗಳ ಬಳಕೆ ಮತ್ತು ನಿರ್ಗತಿಕರ ಮಾಸಾಶನ ಬಗ್ಗೆ ವಾತ್ಸಲ್ಯ ಮನೆಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾಮೀಣ ಪ್ರದೇಶದ ಬ್ಯಾಂಕಿನ ಆರ್ಥಿಕತೆಯನ್ನು ಜನಸಾಮಾನ್ಯರಿಗೆ ತಲುಪಿಸಿ ಗ್ರಾಮೀಣ ಪ್ರದೇಶದ ಜನರನ್ನು ಸ್ವಾವಲಂಬಿಗಳಾಗಿ ಮಾಡಿರುವುದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಸ್ಕಾಚ್ ಪ್ರಶಸ್ತಿ ತಮ್ಮ ಸಂಸ್ಥೆಗೆ ಲಭಿಸಿದೆ ಎಂದು ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ಎಂ ಸವಿತಾ ಮಾತನಾಡಿ, ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಶ್ರೀರಂಗಪಟ್ಟಣ ಇವರು ಮಹಿಳೆಯರ ಆರೋಗ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಆಗುತ್ತಿರುವ ಬದಲಾವಣೆಯ ಅಂಶಗಳಾದ ಸ್ತನ ಕ್ಯಾನ್ಸರ್ ಮತ್ತು ಗರ್ಭಕೋಶದ ಕ್ಯಾನ್ಸರ್ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ರಂಗೋಲಿ ಸ್ಪರ್ಧೆ, ನೃತ್ಯ, ಹಾಡು, ಅಮ್ಮನಿಗೊಂದು ಪತ್ರ, ವಿವಿಧ ಸ್ಟಾಲ್, ಆರತಿ ತಟ್ಟೆ ಅಲಂಕಾರ, ಫ್ಯಾನ್ಸಿ ಡ್ರೆಸ್ ಕಾರ್ಯಕ್ರಮಗಳನ್ನೂ ಏರ್ಪಡಿಸಲಾಯಿತು.

ಶ್ರೀರಂಗಪಟ್ಟಣ ಠಾಣಾ ಪೊಲೀಸ್ ಇನ್ಸ್‌ಪೆಕ್ಟರ್ ಬಿಜಿ ಕುಮಾರ್, ನ್ಯಾಯವಾದಿ ಕೃಪಾಶ್ರೀ, ಕಾರ್ಯಕ್ರಮದಲ್ಲಿ ಪ್ರಾದೇಶಿಕ ಜ್ಞಾನ ವಿಕಾಸ ಯೋಜನಾಧಿಕಾರಿಯವರಾದ ಮೂಕಾಂಬಿಕಾ, ಗಣಪತಿ ಭಟ್, ಗಾಯತ್ರಿ ದೇವಿ, ನಳಿನಾ ಗಣಪತಿ ಭಟ್ಟ, ತಾಲೂಕಿನ ಮೇಲ್ವಿಚಾರಕರಾದ ಭಾಗ್ಯಮ್ಮ, ಅಶ್ವಿನಿ, ಆಶಾರಾಣಿ ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

19/01/2026 10:23 pm

Cinque Terre

5.04 K

Cinque Terre

0

ಸಂಬಂಧಿತ ಸುದ್ದಿ