ಮಡಿಕೇರಿ: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಲವ್ ಜಿಹಾದ್ ಮತ್ತು ಮತಾಂತರ ವ್ಯಾಪಕವಾಗಿ ನಡೆಯುತ್ತಿದ್ದು, ಇದರ ವಿರುದ್ಧವಾಗಿ ಕೊಡಗು ಹಿಂದೂ ಸುರಕ್ಷಾ ಸಮಿತಿ ವತಿಯಿಂದ ಜ.27 ರಂದು ಸಿದ್ದಾಪುರದಲ್ಲಿ ಪ್ರತಿಭಟನಾ ಮೆರವಣಿಗೆ ಮತ್ತು ಜನಾಕ್ರೋಶ ಸಭೆ ನಡೆಯಿಲಿದೆಯೆಂದು ಸಮಿತಿಯ ಜಿಲ್ಲಾ ಸಂಚಾಲಕ ಕುಕ್ಕೇರ ಅಜಿತ್ ತಿಳಿಸಿದ್ದಾರೆ.
ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10.30 ಗಂಟೆಗೆ ಸಿದ್ದಾಪುರದ ಶ್ರೀ ಅಯ್ಯಪ್ಪ ದೇವಾಲಯದ ಆವರಣದಿಂದ ಬಸ್ ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಬಳಿಕ ಬಸ್ ನಿಲ್ದಾಣದಲ್ಲೆ ಜನಾಕ್ರೋಶ ಸಭೆ ನಡೆಯಲಿದೆಯೆಂದು ಮಾಹಿತಿಯನ್ನಿತ್ತರು.
ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆಗಳು ಲವ್ ಜಿಹಾದ್ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕುವಂತೆ ಈ ಸಂದರ್ಭ ಅವರು ಆಗ್ರಹಿಸಿದರು.
ಗೋಷ್ಠಿಯಲ್ಲಿ ಹಿಂದೂ ಸುರಕ್ಷಾ ಸಮಿತಿಯ ಸಹ ಸಂಚಾಲಕ ಸಂತೋಷ್ ಕುಶಾಲನಗರ, ಪದಾಧಿಕಾರಿಗಳಾದ ಲಾಲಾ ಅಯ್ಯಣ್ಣ, ವೈ.ಪಿ. ಭೋಜೇಗೌಡ, ಪಿ.ಎ.ಕುಮಾರ್, ಪಿ.ಇ. ರಮೇಶ್ ಉಪಸ್ಥಿತರಿದ್ದರು.
Kshetra Samachara
20/01/2026 06:54 am
LOADING...