ಐದಾರು ಯುವಕರಿಂದ ಓರ್ವ ಯುವಕನಿಗೆ ಅಮಾನವೀಯವಾಗಿ ಥಳಿಸಿ, ಮಾರಣಾಂತಿಕವಾಗಿ ಹಲ್ಲೆಗೈದಿರುವ ಘಟನೆ ವಿಜಯಪುರ ನಗರದ ಹೊರ ಭಾಗದ ರಂಭಾಪುರ ಬಳಿಯ ನೂತನವಾಗಿ ನಿರ್ಮಾಣವಾದ ಬಡಾವಣೆಯಲ್ಲಿ ಸಂಭವಿಸಿದೆ.
ವಿಜಯಪುರ ನಗರ ನಿವಾಸಿ ಪೈಗಂಬರ್ ಮುಲ್ಲಾ ಎಂಬಾಂತನ ಮೇಲೆ ಯುವಕರ ಗ್ಯಾಂಗ್ ಹಲ್ಲೆಗೈದಿದ್ದಾರೆ. ಜಾವೀದ್ ಸೌದಾಗರ, ತೌಫೀಕ್ ಬಿಲಾಲ್ ಹಾಗೂ ಇತರರಿಂದ ಕೃತ್ಯ ಎಸೆಗಿದ್ದಾರೆ.
ಇತ್ತೀಚೆಗೆ ಪೈಗಂಬರ್ ಮುಲ್ಲಾ ಕಲಬುರಗಿ ಜಿಲ್ಲೆಯ ಶಾಬಾದ್ ನಲ್ಲಿ ನೆಲೆಸಿದ್ದ. ಅಲ್ಲದೇ, 2023 ರಲ್ಲಿ ಹತ್ಯೆಯಾದ ರೌಡಿ ಶೀಟರ್ ಹೈದರ್ ನದಾಫ್ ನಿಕಟವರ್ತಿಯಾಗಿದ್ದ ಪೈಗಂಬರ್.
ಹೈದರ್ ನದಾಫ್ ಹತ್ಯೆ ಬಳಿಕ ಕಲಬುರಗಿಯ ಶಾಬಾದ್ ನಲ್ಲಿದ್ದ ಪೈಗಂಬರ್ ವಾಸಿಸುತ್ತಿದ್ದನು. ಇದೀಗ ವಿಜಯಪುರದ ಯುವಕರ ಗ್ಯಾಂಗ್ ಪೈಗಂಬರ್ ಮೇಲೆ ಹಳೆಯ ವೈಷಮ್ಯದ ಕಾರಣ ಶಾಬಾದ್ ನಿಂದ ಕರೆ ತಂದು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಹಿಂದೆ ಹೈದರ್ ನದಾಫ್ ಜೊತೆ ಗುರುತಿಸಿಕೊಂಡಿದಕ್ಕೆ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಪೈಗಂಬರ್ ಕಲಬುರಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಾಹಿತಿ ಲಭ್ಯವಾಗಿದೆ, ಗೋಲಗುಂಬಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಹಲ್ಲೆ ವಿಡಿಯೋ ಆಧರಿಸಿ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ
Kshetra Samachara
20/01/2026 01:54 pm
LOADING...