ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಂಜನಗೂಡು: ಮನೆ ಮುಂದೆ ಕಟ್ಟಿಹಾಕಿದ್ದ ಸಾಕು ನಾಯಿ ಹೊತ್ತೊಯ್ದ ಚಿರತೆ -ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ನಂಜನಗೂಡು: ನಗರಸಭೆ ಇಂಜಿನಿಯರ್ ಪ್ರತಿಮಾ ರವರ ಮನೆಯ ಸಾಕು ನಾಯಿಯನ್ನ ಚಿರತೆ ಹೊತ್ತೊಯ್ದ ಘಟನೆ ನಂಜನಗೂಡಿನ ದೇವೀರಮ್ಮನಹಳ್ಳಿಯಲ್ಲಿ ನಡೆದಿದೆ. ಮಧ್ಯರಾತ್ರಿ ಸುಮಾರು 2.40 ರ ವೇಳೆ ಬಂದ ಚಿರತೆ ಮನೆ ಮುಂದೆ ಕಟ್ಟಿಹಾಕಿದ್ದ ನಾಯಿಯನ್ನ ಹೊತ್ತೊಯ್ದಿದೆ. ಈ ಸಂಬಂಧ ಪ್ರತಿಮಾ ರವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಬಂದಿಲ್ಲವೆಂದು ಆರೋಪಿಸಿದ್ದಾರೆ. ಚಿರತೆಯನ್ನ ಸೆರೆ ಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Edited By : Vinayak Patil
PublicNext

PublicNext

20/01/2026 02:58 pm

Cinque Terre

14.99 K

Cinque Terre

0

ಸಂಬಂಧಿತ ಸುದ್ದಿ