ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಸುತ್ತೂರು ಜಾತ್ರೆಯಲ್ಲಿ ಕಣ್ಮನ ಸೆಳೆದ ಅದ್ದೂರಿ ತೆಪ್ಪೋತ್ಸವ - ಭಕ್ತರ ಭಕ್ತಿ ಸಾಗರ!

ಮೈಸೂರು: ಮೈಸೂರಿನ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಅದ್ದೂರಿ ತೆಪ್ಪೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಕಣ್ಮನ ಸೆಳೆಯಿತು. ಕಪಿಲಾ ನದಿಯಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಮೂರ್ತಿಯನ್ನು ತೆಪ್ಪದಲ್ಲಿ ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಭವ್ಯ ತೆಪ್ಪೋತ್ಸವವನ್ನು ವೀಕ್ಷಿಸಲು ರಾಜ್ಯದ ಮೂಲೆ ಮೂಲೆಗಳಿಂದಲೂ ಭಕ್ತರು ಆಗಮಿಸಿದ್ದರು.

ಸಮಾರೋಪ ಸಮಾರಂಭ

ಶಾಸಕ ಅನಿಲ್ ಚಿಕ್ಕಮಾದು ಅವರು ತೆಪ್ಪೋತ್ಸವಕ್ಕೆ ಚಾಲನೆ ನೀಡಿದರು. ಜಾತ್ರಾ ಮಹೋತ್ಸವವು ಇಂದು (ಭಾನುವಾರ) ಕೊನೆಗೊಳ್ಳಲಿದ್ದು, ಸಮಾರೋಪ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾಗವಹಿಸಿದ್ದಾರೆ.

Edited By : Vinayak Patil
PublicNext

PublicNext

20/01/2026 10:23 pm

Cinque Terre

12.21 K

Cinque Terre

0

ಸಂಬಂಧಿತ ಸುದ್ದಿ