ಯಾದಗಿರಿ: ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಇಬ್ರಾಹಿಂಪುರದಲ್ಲಿರುವ ಶ್ರೀ ಸಾಯಿಬಾಬಾ ಮಂದಿರದ 4ನೇ ವಾರ್ಷಿಕ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿತು. ಈ ಜಾತ್ರಾ ಮಹೋತ್ಸವದಲ್ಲಿ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ನಟ ಡಾಲಿ ಧನಂಜಯ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ದೀಪ ಬೆಳಗಿಸುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಟ ಡಾಲಿ ಧನಂಜಯ ಅವರೊಂದಿಗೆ ಮಾಜಿ ಸಚಿವ ಶಿವನಗೌಡ ಪಾಟೀಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಯಾದಗಿರಿಗೆ ಇದೇ ಮೊದಲ ಬಾರಿಗೆ ಭೇಟಿ ನೀಡಿದ ನಟ ಡಾಲಿ ಧನಂಜಯ ಅವರನ್ನು ನೋಡಲು ಸಹಸ್ರಾರು ಸಂಖ್ಯೆಯ ಜನರು ಜಮಾಯಿಸಿದ್ದರು.
PublicNext
21/01/2026 11:33 am
LOADING...