ಧಾರವಾಡ: ಸದ್ಯ ಕಡಲೆ ಕಟಾವು ಜೋರಾಗಿ ನಡೆದಿದ್ದು, ಶೀಘ್ರ ರಾಜ್ಯ ಸರ್ಕಾರ ಧಾರವಾಡ ಜಿಲ್ಲೆಯಲ್ಲಿ ಕಡಲೆ ಖರೀದಿ ಕೇಂದ್ರ ತೆರೆಯಬೇಕು ಎಂದು ಆಗ್ರಹಿಸಿ ಅಣ್ಣಿಗೇರಿ ರೈತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ಕಳೆದ ಮುಂಗಾರು ಬೆಳೆಗಳು ಮಳೆಯಿಂದ ಹಾನಿಗೀಡಾಗಿ ರೈತ ಸಾಕಷ್ಟು ತೊಂದರೆ ಅನುಭವಿಸಬೇಕಾಯಿತು. ಹಿಂಗಾರು ಹಂಗಾಮಿನ ಪ್ರಮುಖ ಬೆಳೆಯಾದ ಕಡಲೆ ಈಗಾಗಲೇ ಬಂದಿದ್ದು, ಸರ್ಕಾರ ಕೂಡಲೇ ಖರೀದಿ ಕೇಂದ್ರ ತೆರೆದು ರೈತರು ಬೆಳೆದ ಕಡಲೆಯನ್ನು ಖರೀದಿ ಮಾಡಬೇಕು ಎಂದು ರೈತರು ಆಗ್ರಹಿಸಿದರು.
Kshetra Samachara
21/01/2026 04:43 pm
LOADING...