ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ‌ - 120ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆ

ಮಾಲೂರು - ಸರ್ಕಾರದ ಸವಲತ್ತು ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ತಲುಪಿಸಲು. ತಾಲ್ಲೂಕು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಆಡಳಿತವನ್ನೇ ಜನರ ಬಳಿಗೆ ಕೊಂಡೊಯ್ಯುವ ಪ್ರಾಮಾಣಿಕ ಪ್ರಯತ್ನವೇ 'ತಾಲ್ಲೂಕು ಆಡಳಿತದ ನಡೆ ಗ್ರಾಮದ ಕಡೆ' ಕಾರ್ಯಕ್ರಮ ಎಂದು ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು.

ತಾಲ್ಲೂಕು ಆಡಳಿತ ವತಿಯಿಂದ ಹಸಾಂಡಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನ ಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ನೀಡಲು ತಾಲ್ಲೂಕು ಆಡಳಿತ ಮುಂದಾಗಿದ್ದು, ಸೋಮವಾರದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ನೂಟವೆ, ಹಸಾಂಡಹಳ್ಳಿ, ರಾಜೇನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯಕ್ರಮ ನಡೆಯಿತು ಎಂದರು.

Edited By : PublicNext Desk
Kshetra Samachara

Kshetra Samachara

21/01/2026 06:14 pm

Cinque Terre

280

Cinque Terre

0

ಸಂಬಂಧಿತ ಸುದ್ದಿ