ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಜ.25 ರಂದು "ಜ್ಞಾನ ದೇಗುಲ" ಸ್ಮರಣ ಸಂಚಿಕೆ ಬಿಡುಗಡೆ

ಧಾರವಾಡ: ಉಪ್ಪಿನ ಬೆಟಗೇರಿ ಗ್ರಾಮದ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯ ಶತಮಾನೋತ್ಸವ ಸುವರ್ಣ ಮಹೋತ್ಸವದ ಅಂಗವಾಗಿ ಪ್ರಕಟಿಸಲಾದ "ಜ್ಞಾನ ದೇಗುಲ" ಎಂಬ ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭವನ್ನು ಜ.25 ರಂದು ಉಪ್ಪಿನ ಬೆಟಗೇರಿ ಗ್ರಾಮದ ವಿರುಪಾಕ್ಷೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶತಮಾನೋತ್ಸವ ಸಮಿತಿ ಅಧ್ಯಕ್ಷ ಹಾಗೂ ಕರ್ನಾಟಕ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ತವನಪ್ಪ ಅಷ್ಟಗಿ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆಯ ಶತಮಾನೋತ್ಸವ ಸಮಾರಂಭವು 2023ರಲ್ಲಿ ನಡೆದಿತ್ತು. ಅದರ ಸವಿ ನೆನಪಿಗಾಗಿ ಇದೀಗ ಜ್ಞಾನ ದೇಗುಲ ಎಂಬ ಸ್ಮರಣ ಸಂಚಿಕೆಯನ್ನು ಪ್ರಕಟಿಸಲಾಗಿದೆ. ಶತಮಾನೋತ್ಸವ ಸಂದರ್ಭದಲ್ಲಿ ಸಾಂಕೇತಿಕವಾಗಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಗಿತ್ತು. ಈಗ ಅಚ್ಚುಕಟ್ಟಾದ ಸ್ಮರಣ ಸಂಚಿಕೆ ಸಿದ್ಧಪಡಿಸಲಾಗಿದ್ದು, ಅದನ್ನು ಜ.25 ರಂದು ಬಿಡುಗಡೆ ಮಾಡಲಾಗುವುದು. ಕುಮಾರ ವಿರುಪಾಕ್ಷ ಸ್ವಾಮೀಜಿಗಳ ಸಾನಿಧ್ಯದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.

ಶಾಲೆಯಲ್ಲಿ ಶತಮಾನೋತ್ಸವ ಸಮಾರಂಭದ ಸವಿನೆನಪಿಗಾಗಿ ಶಿಲನ್ಯಾಸ ಅನಾವರಣ, ವಿವಿಧ ಭಾವಚಿತ್ರಗಳ ಅಳವಡಿಕೆ ಕಾರ್ಯಕ್ರಮ ಕೂಡ ನಡೆಯಲಿದೆ. ಈ ಶಾಲೆಯಲ್ಲಿ ಕಲಿತ ಅನೇಕರು ಇದೀಗ ದೊಡ್ಡ ದೊಡ್ಡ ಹುದ್ದೆಯಲ್ಲಿದ್ದಾರೆ. ಅವರೆಲ್ಲರೂ ಶತಮಾನೋತ್ಸವದ ಕಾರ್ಯಕ್ರಮದ ವೇಳೆ ತನು, ಮನ, ಧನ ಸಹಾಯ ಮಾಡಿದ್ದಾರೆ. ಎಲ್ಲ ಹಳೆಯ ವಿದ್ಯಾರ್ಥಿಗಳು ಮತ್ತೊಮ್ಮೆ ಒಂದೆಡೆ ಸೇರಬೇಕು ಎಂಬ ಉದ್ದೇಶದಿಂದ ಈ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.

ಎಸ್‌ಡಿಎಂಸಿ ಅಧ್ಯಕ್ಷ ನಿಜಗುಣಿ ಹೂಲಿ, ಶತಮಾನೋತ್ಸವ ಸಮಿತಿ ಸದಸ್ಯರಾದ ಗುರು ತಿಗಡಿ, ಕಾಶಪ್ಪ ದೊಡವಾಡ, ವಿರುಪಾಕ್ಷಪ್ಪ ದೊಡವಾಡ, ಮಂಜುನಾಥ ಸಂಕಣ್ಣವರ, ಹಿರಿಯರಾದ ಶಿವಪ್ಪ ವಿಜಾಪುರ ಸೇರಿದಂತೆ ಅನೇಕರು ಸುದ್ದಿಗೋಷ್ಠಿಯಲ್ಲಿದ್ದರು.

Edited By : PublicNext Desk
Kshetra Samachara

Kshetra Samachara

21/01/2026 07:48 pm

Cinque Terre

6.72 K

Cinque Terre

0

ಸಂಬಂಧಿತ ಸುದ್ದಿ