ಹಾವೇರಿ ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ಇದೇ ಜನವರಿ 24 ಮತ್ತು 25 ರಂದು ಸವಣೂರಿನಲ್ಲಿ ನಡೆಯಲಿದೆ.
ಎರಡು ದಿನಗಳ ಈ ಸಮ್ಮೇಳನದ ಕುರಿತು ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಅಧ್ಯಕ್ಷ ಲಿಂಗಯ್ಯ ಹಿರೇಮಠ ಅವರು ಹಾವೇರಿಯಲ್ಲಿ ಮಾಹಿತಿ ನೀಡಿದ್ದಾರೆ.
ಸವಣೂರಿನಲ್ಲಿ ನಡೆಯಲಿರುವ ಈ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಹೆಚ್.ಐ. ತಿಮ್ಮಾಪುರ ಅವರನ್ನು ಆಯ್ಕೆ ಮಾಡಲಾಗಿದೆ. ಎರಡು ದಿನಗಳ ಈ ಸಾಹಿತ್ಯ ಸಮ್ಮೇಳನದಲ್ಲಿ ಒಟ್ಟು ಎಂಟು ಗೋಷ್ಠಿಗಳು ಆಯೋಜನೆಗೊಳ್ಳಲಿವೆ ಎಂದು ಲಿಂಗಯ್ಯ ಹಿರೇಮಠ ತಿಳಿಸಿದ್ದಾರೆ.
ಸಮ್ಮೇಳನ ಆರಂಭಕ್ಕೂ ಮುನ್ನ ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆ ನಡೆಯಲಿದೆ. ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ ಎಂದು ಕಸಾಪ ಜಿಲ್ಲಾಧ್ಯಕ್ಷರು ಮಾಹಿತಿ ನೀಡಿದರು.
PublicNext
21/01/2026 09:12 pm
LOADING...