ಮಡಿಕೇರಿ: ದೇಶದ ಸ್ವಾತಂತ್ರ್ಯ ಮತ್ತು ಸಾರ್ವಭೌಮತ್ವವನ್ನು ರಕ್ಷಿಸುವಲ್ಲಿ ತಮ್ಮ ಜೀವನವನ್ನು ಸಮರ್ಪಿಸಿರುವ ಭಾರತೀಯ ಸೇನೆಯ ಶೌರ್ಯ, ತ್ಯಾಗ ಮತ್ತು ನಿಸ್ವಾರ್ಥ ಸೇವೆಯನ್ನು ಗೌರವಿಸುವ ಉದ್ದೇಶದಿಂದ ಕೊಡಗು ಸೈನಿಕ ಶಾಲೆಯಲ್ಲಿ ಸೇನಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಟಾರಿ ನಿಲಯದ ವಿದ್ಯಾರ್ಥಿಗಳು ಪ್ರೇರಣಾದಾಯಕ ಐಎಂಎ ಗೀತೆಯ ಗಾಯನದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಭಾರತೀಯ ಸೇನೆ ಹಾಗೂ ಅದರ ವೈಭವಶಾಲಿ ಪರಂಪರೆಯ ಗೌರವಕ್ಕೆ ಅರ್ಥಪೂರ್ಣ ನಮನ ಸಲ್ಲಿಸಲಾಯಿತು.
ದಿನದ ಸುಭಾಷಿತ, ಕವನವಾಚನ ಹಾಗೂ ಭಾರತೀಯ ಸೇನೆ ಮತ್ತು ಅದರ ಕಾರ್ಯಾಚರಣೆಗಳ ವಿವಿಧ ಅಂಶಗಳನ್ನು ವಿವರಿಸುವ ಕುರಿತು ಹಲವು ದೃಷ್ಯಾವಳಿಗಳ ಮೂಲಕ ಪ್ರಾತ್ಯಕ್ಷಿಕೆ ನೀಡಿದರು.
Kshetra Samachara
22/01/2026 08:08 am
LOADING...