ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಲ್ಲೆಂದರಲ್ಲಿ ಗಾಡಿ ಪಾರ್ಕ್ ಮಾಡೋರು ಈ ಸ್ಟೋರಿ ನೋಡಿ

ದಾವಣಗೆರೆ : ದಾವಣಗೆರೆ ನಗರದಲ್ಲಿ ಎಲ್ಲೆಂದರಲ್ಲಿ ವಾಹನ ಸವಾರರು ತಮ್ಮ ವಾಹನಗಳನ್ನು ನಿಲ್ಲಿಸಲು ಇನ್ನು ಮುಂದೆ ಯೋಚಿಸಬೇಕಿದೆ. ವಾಹನ ನಿಲುಗಡೆ ನಿಷೇಧ ಸ್ಥಳಗಳು, ಪಾದಚಾರಿಗಳ ಮಾರ್ಗಗಳು ಹಾಗೂ ಸಂಚಾರಕ್ಕೆ ಅಡ್ಡಿಯಾಗುವಂತೆ ವಾಹನ ನಿಲುಗಡೆ ಮಾಡಿರುವ ವಾಹನಗಳನ್ನು ತೆರವುಗೊಳಿಸುವ ಉದ್ದೇಶದಿಂದ ಸಿದ್ಧಪಡಿಸಲಾದ ಝೀಬ್ರಾ ಟೋಯಿಂಗ್ ವಾಹನಗಳಿಗೆ ಚಾಲನೆ ನೀಡಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರುಝೀಬ್ರಾ ಟೋಯಿಂಗ್ ವಾಹನಗಳಿಗೆ ಚಾಲನೆ ನೀಡಿದರು. ವಾಹನಈ ಕ್ರಮದ ಮೂಲಕ ನಗರದಲ್ಲಿ ಸಂಚಾರ ಶಿಸ್ತು ಬಲಪಡಿಸುವುದರ ಜೊತೆಗೆ ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕೈಗೊಳ್ಳಲು ಸೂಚನೆ ನೀಡಿದರು. ಈವೇಳೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ, ಎಸ್ಪಿ ಉಮಾ ಪ್ರಶಾಂತ್, ಪಾಲಿಕೆ ಆಯುಕ್ತ ರೇಣುಕಾ, ಎಎಸ್ಪಿ ಪರಮೇಶ್ವರ ಹೆಗಡೆ ಭಾಗಿಯಾಗಿದ್ದರು.

Edited By : Nirmala Aralikatti
PublicNext

PublicNext

23/01/2026 10:37 am

Cinque Terre

12.27 K

Cinque Terre

0