ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸಂಸದ ಕ್ರೀಡಾ ಮಹೋತ್ಸವಕ್ಕೆ ಚಾಲನೆ

ಧಾರವಾಡ: ಧಾರವಾಡದ ಕೆಸಿಡಿ ಮೈದಾನದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಕೇಂದ್ರ ಸಚಿವರೂ ಆದ ಧಾರವಾಡ ಸಂಸದ ಪ್ರಹ್ಲಾದ ಜೋಶಿ ಪ್ರಾಯೋಜಕತ್ವದಲ್ಲಿ ಸಂಸದ ಕ್ರೀಡಾಕೂಟ ಆಯೋಜನೆ ಮಾಡಲಾಗಿದ್ದು, ಈ ಕ್ರೀಡಾಕೂಟಕ್ಕೆ ಇಂದು ಚಾಲನೆ ದೊರೆಯಿತು.

ಕಬಡ್ಡಿ, ಖೋಖೋ, ವಾಲಿಬಾಲ್ ಸೇರಿದಂತೆ ವೈಯಕ್ತಿಕ ಕ್ರೀಡಾಕೂಟಗಳನ್ನೂ ಇಲ್ಲಿ ಆಯೋಜನೆ ಮಾಡಲಾಗಿದೆ. ಈ ಕ್ರೀಡಾಕೂಟಕ್ಕೆ ಮೇಯರ್ ಜ್ಯೋತಿ ಪಾಟೀಲ, ಮಾಜಿ ಶಾಸಕಿ ಸೀಮಾ ಮಸೂತಿ ಸೇರಿದಂತೆ ಬಿಜೆಪಿ ಮುಖಂಡರಾದ ಪಿ.ಎಚ್.ನೀರಲಕೇರಿ, ಸಂಜಯ ಕಪಟಕರ, ಶಿವು ಹಿರೇಮಠ ಸೇರಿದಂತೆ ಅನೇಕರು ಕ್ರೀಡಾ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಶುಕ್ರವಾರ ಹಾಗೂ ಶನಿವಾರ ಕೆಸಿಡಿ ಮೈದಾನದಲ್ಲಿ ಗುಂಪು ಪಂದ್ಯಗಳಾದ ಕಬಡ್ಡಿ, ಖೋಖೋ, ವಾಲಿಬಾಲ್ ಕ್ರೀಡೆಗಳ ಜೊತೆಗೆ ವೈಯಕ್ತಿಕ ಆಟಗಳಾದ ರನ್ನಿಂಗ್, ಜಂಪಿಂಗ್ ಸೇರಿದಂತೆ ಇತ್ಯಾದಿ ಕ್ರೀಡೆಗಳು ನಡೆಯಲಿವೆ. ಸ್ಪರ್ಧೆಯಲ್ಲಿ ಗೆದ್ದ ವಿಜೇತ ಅಭ್ಯರ್ಥಿಗಳಿಗೆ ನಗದು ಪುರಸ್ಕಾರವನ್ನೂ ನೀಡಲಾಗುತ್ತಿದೆ. ಧಾರವಾಡ ಸಂಸದರಾದ ಪ್ರಹ್ಲಾದ ಜೋಶಿ ಅವರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ನಾಲ್ಕು ಕಡೆಗಳಲ್ಲಿ ಈಗ ಸಂಸದ ಕ್ರೀಡಾಮಹೋತ್ಸವ ಪೂರ್ಣಗೊಂಡಿದ್ದು, ಐದನೇ ಕ್ರೀಡಾ ಮಹೋತ್ಸವ ಇದೀಗ ಕೆಸಿಡಿ ಮೈದಾನದಲ್ಲಿ ನಡೆಯುತ್ತಿದೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

23/01/2026 02:18 pm

Cinque Terre

24.49 K

Cinque Terre

0

ಸಂಬಂಧಿತ ಸುದ್ದಿ