ರಾಮನಗರ: ಸರ್ಕಾರಿ ಜಾಗದಲ್ಲಿ ನಾಗರಕಟ್ಟೆ ನಿರ್ಮಾಣವಾಗಿರುವ ಕಡೆ ಡಾ.ಬಿ.ಆರ್.ಅಂಬೇಡ್ಕರ್ ಬೋರ್ಡ್ ಹಾಕಿರುವ ವಿಚಾರವಾಗಿ ಎರಡು ಸಮುದಾಯಗಳ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದೇವರಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆ ತಿಳಿದು ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣ ಮಾಡಿದ್ದಾರೆ. ಯಾರೋ ಕಿಡಿಗೇಡಿಗಳ ಕೆಲಸದಿಂದಾಗಿ ಗ್ರಾಮದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಿದ್ದು ಪೊಲೀಸರು ಕಟ್ಟುನಿಟ್ಟಿನ ಕ್ರಮವಹಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
Kshetra Samachara
23/01/2026 03:15 pm
LOADING...