ಶಿಡ್ಲಘಟ್ಟ: ಫ್ಲೆಕ್ಸ್ ತೆರವುಗೊಳಿಸುವ ವಿಚಾರದಲ್ಲಿ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದಿಸಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕೆಪಿಸಿಸಿ (ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ) ಪಕ್ಷದಿಂದ ಅಮಾನತುಗೊಳಿಸಿದೆ. ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯು ಈ ಅಮಾನತು ಆದೇಶವನ್ನು ಹೊರಡಿಸಿದೆ. ಪೌರಾಯುಕ್ತೆಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗುತ್ತಿದ್ದಂತೆ, ರಾಜೀವ್ ಗೌಡ ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ.
ಘಟನೆ ಹಿನ್ನೆಲೆ ಮತ್ತು ನೋಟಿಸ್
ಈ ಹಿಂದೆ, ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ಫ್ಲೆಕ್ಸ್ ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಧಮ್ಕಿ ಹಾಕಿದ ಆರೋಪದ ಮೇಲೆ ರಾಜೀವ್ ಗೌಡ ಅವರಿಗೆ ಕೆಪಿಸಿಸಿ ನೋಟಿಸ್ ಜಾರಿ ಮಾಡಿತ್ತು. ಘಟನೆಯ ಬಗ್ಗೆ ವಿವರಣೆ ಕೇಳಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಈ ನೋಟಿಸ್ ನೀಡಿದ್ದರು. ಏಳು ದಿನಗಳ ಒಳಗೆ ನೋಟಿಸ್‌ಗೆ ಉತ್ತರ ನೀಡುವಂತೆ ಸೂಚಿಸಲಾಗಿತ್ತು. ತಪ್ಪಿದಲ್ಲಿ ಶಿಸ್ತು ಸಮಿತಿಯು ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಸಲಾಗಿತ್ತು. ಇದೀಗ ಆ ಎಚ್ಚರಿಕೆಯಂತೆ ಕೆಪಿಸಿಸಿ ಶಿಸ್ತು ಸಮಿತಿಯು ರಾಜೀವ್ ಗೌಡ ಅವರನ್ನು ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಿದೆ.
ವರದಿ: ಚಿಕ್ಕತೇಕಹಳ್ಳಿ ಡಿ ಶಿವಕುಮಾರ್, ಪಬ್ಲಿಕ್ ನೆಕ್ಸ್ಟ್, ಚಿಕ್ಕಬಳ್ಳಾಪುರ
PublicNext
23/01/2026 06:09 pm
LOADING...