ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಂಗ್ರೆಸ್ ಮುಖಂಡ ಮುರಳಿ ಮೋಹನ್ ಮೇಲಿನ ಆರೋಪ ಸುಳ್ಳು: ನಂದೀಶ್ ಸ್ಪಷ್ಟನೆ

ಹಾಸನ: ಸಕಲೇಶಪುರದಲ್ಲಿ ಜನವರಿ 16 ರಂದು ನಡೆದ 'ಜನಸ್ಪಂದನ' ಕಾರ್ಯಕ್ರಮದ ವೇಳೆ ಆಲೂರು-ಸಕಲೇಶಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಮುರಳಿ ಮೋಹನ್ ಅವರ ವಿರುದ್ಧ ಮಾಡಲಾಗಿರುವ ಆರೋಪಗಳು ಕೇವಲ ಅಪಪ್ರಚಾರ ಮತ್ತು ಸತ್ಯಕ್ಕೆ ದೂರವಾದವು ಎಂದು ಕಾಂಗ್ರೆಸ್ ಮುಖಂಡ ನಂದೀಶ್ ತಿಳಿಸಿದ್ದಾರೆ.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರ ಸಾರಥ್ಯದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಹಾಗೂ ಅನೇಕ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಕಾರ್ಯಕ್ರಮದ ವೇಳೆ ಸಣ್ಣಸ್ವಾಮಿ ಎಂಬುವವರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಆದರೆ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ನಂದೀಶ್ ಸ್ಪಷ್ಟಪಡಿಸಿದರು.

Edited By : PublicNext Desk
Kshetra Samachara

Kshetra Samachara

23/01/2026 07:39 pm

Cinque Terre

780

Cinque Terre

0

ಸಂಬಂಧಿತ ಸುದ್ದಿ