ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯನಗರ: ಅಪಾರ ಸಂಖ್ಯೆಯಲ್ಲಿ ಕೊಟ್ಟೂರು ಬಸವೇಶ್ವರ ಜಾತ್ರೆಯ ರಥದ ಗಾಲಿ ಹೊರಕ್ಕೆ ಹಾಕೋ ಕಾರ್ಯ ಸಂಪನ್ನ

ವಿಜಯನಗರ: ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನಲ್ಲಿ ನಡೆಯುವ ಐತಿಹಾಸಿಕ ಶ್ರೀ ಗುರು ಕೊಟ್ಟೂರು ಬಸವೇಶ್ವರ ಜಾತ್ರಾ ಮಹೋತ್ಸವಕ್ಕೆ ಇಂದು ವಿಧ್ಯುಕ್ತ ಚಾಲನೆ ದೊರೆತಿದೆ.

ಜಾತ್ರೆಯ ಪ್ರಮುಖ ಆಕರ್ಷಣೆಯಾದ ಭವ್ಯ ರಥದ ಚಕ್ರವನ್ನು ಅಪಾರ ಸಂಖ್ಯೆಯ ಸದ್ಭಕ್ತರ ಸಮ್ಮುಖದಲ್ಲಿ ಹೊರಕ್ಕೆ ಹಾಕಲಾಯಿತು. ಈ ಸಂದರ್ಭದಲ್ಲಿ ಶ್ರೀಮಠದ ಭಕ್ತರು ಹಾಗೂ ಅರ್ಚಕರು ವಿವಿಧ ಪೂಜಾ ಕೈಂಕರ್ಯಗಳನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಿದರು. ಕರ್ನಾಟಕ ರಾಜ್ಯದಲ್ಲಿ ಮೂಲಾ ನಕ್ಷತ್ರದಲ್ಲಿ ತೇರು ಸಾಗುವ ಏಕೈಕ ರಥೋತ್ಸವ ಎಂಬ ವಿಶಿಷ್ಟ ಹೆಗ್ಗಳಿಕೆಗೆ ಶ್ರೀ ಗುರು ಕೊಟ್ಟೂರು ಬಸವೇಶ್ವರ ರಥೋತ್ಸವ ಪಾತ್ರವಾಗಿದೆ.

Edited By :
PublicNext

PublicNext

24/01/2026 08:30 am

Cinque Terre

14.99 K

Cinque Terre

0

ಸಂಬಂಧಿತ ಸುದ್ದಿ