ರಬಕವಿ-ಬನಹಟ್ಟಿ ತಾಲೂಕಿನ ರಬಕವಿಯ ಬಸವ ನಗರದಲ್ಲಿ ಕಳ್ಳರ ಗ್ಯಾಂಗ್ ಹಾವಳಿ ನಡೆಸಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಮುಖಕ್ಕೆ ಮಾಸ್ಕ್ ಧರಿಸಿ, ಕೈಯಲ್ಲಿ ರಾಡ್ ಮತ್ತು ಮಾರಕಾಸ್ತ್ರಗಳನ್ನು ಹಿಡಿದು ಓಡಾಡುತ್ತಿರುವ ಈ ಕಳ್ಳರ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ.
ಇದೇ ಬಸವ ನಗರದಲ್ಲಿ ಇತ್ತೀಚೆಗೆ ಮನೆಯೊಂದರ ಬಾಗಿಲು ಮುರಿದು ಕಳ್ಳತನ ಮಾಡಲು ಯತ್ನಿಸಲಾಗಿತ್ತು, ಆದರೆ ಕಳ್ಳರ ಪ್ರಯತ್ನ ವಿಫಲವಾಗಿದೆ. ನೇಕಾರ ನಗರಿ ರಬಕವಿಯಲ್ಲಿ ಮುಖಕ್ಕೆ ಮಾಸ್ಕ್, ಕೈಯಲ್ಲಿ ಮಾರಕಾಸ್ತ್ರ ಹಿಡಿದು ಓಡಾಡುತ್ತಿರುವ ಕಳ್ಳರ ಗ್ಯಾಂಗ್‌ನ ಸಿಸಿಟಿವಿ ದೃಶ್ಯಗಳು ವೈರಲ್ ಆಗಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ. ಈ ಘಟನೆಯು ತೇರದಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
PublicNext
24/01/2026 09:00 am
LOADING...