ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯನಗರ : ಸಿಸಿ ಕ್ಯಾಮರಾ ಕಣ್ಗಾವಲು, ಪೊಲೀಸ್ ಸರ್ಪಗಾವಲಿನಲ್ಲಿ ಭರತ ಹುಣ್ಣಿಮೆಗೆ ಸಿದ್ಧತೆ - ಎಸ್ಪಿ ಜಾಹ್ನವಿ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗ ಗ್ರಾಮದ ಧಾರ್ಮಿಕ ಪ್ರಸಿದ್ಧ ಉಚ್ಚೆಂಗೆಮ್ಮ ದೇವಿ ಸನ್ನಿಧಾನದಲ್ಲಿ ಇದೆ ಜ.30 ರಿಂದ ಫೆ.2 ರವರೆಗೆ ನಡೆಯುವ ಭರತ ಹುಣ್ಣಿಮೆಯಲ್ಲಿ ಡ್ರೋನ್, ಸಿಸಿ ಕ್ಯಾಮೆರಾ ಕಣ್ಗಾವಲು, ಪೊಲೀಸ್ ಸರ್ಪಗಾವಲಿನಲ್ಲಿ ನಡೆಯುವಂತೆ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ವಿಜಯನಗರ ಎಸ್ಪಿ ಜಾಹ್ನವಿ ಮಾಹಿತಿ ನೀಡಿದ್ರು.

ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗ ಗ್ರಾಮದ ಐತಿಹಾಸಿಕ ಉಚ್ಚೆಂಗೆಮ್ಮ ದೇವಿ ಸನ್ನಿಧಾನ ಮತ್ತು ಬೆಟ್ಟದಲ್ಲಿ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿ ಅವರು, ಅನಿಷ್ಟ ಪದ್ಧತಿಗಳು ಶಾಶ್ವತವಾಗಿ ಕಡಿವಾಣ ಬಿದ್ದಿದೆ.

ಮರುಕಳಿಸದಂತೆ ಪೊಲೀಸ್ ಸರ್ಪಗಾವಲಲ್ಲಿ 50ಕ್ಕೂ ಹೆಚ್ಚಿನ ಸೂಕ್ಷ್ಮ ಪ್ರದೇಶದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತದೆ. ಡ್ರೋನ್ ಬಳಸಿ ಜಾತ್ರೆಯ ಪೂರ್ಣ ಚಿತ್ರೀಕರಣ ಮಾಡಲಾಗುತ್ತದೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು. ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದರೆ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯಾದ್ಯಂತ ಲಕ್ಷಾಂತರ ಭಕ್ತರು ಪಾಲ್ಗೊಳ್ಳೋದರಿಂದ ಟ್ರಾಫಿಕ್ ಸಮಸ್ಯೆ ಎದುರಾಗದಂತೆ ಪ್ರತ್ಯೇಕ ಕಡೆಗಳಲ್ಲಿ ತಾತ್ಕಾಲಿಕ ಬಸ್ ನಿಲ್ದಾಣ ವ್ಯವಸ್ಥೆ ಕಲ್ಪಿಸಲಾಗಿದೆ. ವಾಹನವನ್ನು ನಿಗದಿತ ಸ್ಥಳದಲ್ಲಿ ನಿಲ್ಲಿಸಬೇಕು.

ಬೆಟ್ಟದ ಅಪೂರ್ಣವಾಗಿರುವ ತಡೆಗೋಡೆ ತುರ್ತು ಅಳವಡಿಸಿ, ಜನಸಂದಣಿ ಹೆಚ್ಚಿರುವ ಕಡೆಗಳಲ್ಲಿ ತಾತ್ಕಾಲಿಕ ಬ್ಯಾರಿಕೇಡ್‌ಗಳನ್ನು ಅಳವಡಿಸಬೇಕು.

ದೇವಸ್ಥಾನದ ರಾಜ ಬೀದಿಯಲ್ಲಿ ಅಂಗಡಿಗಳನ್ನು ಹಾಕಬಾರದು, ಭಕ್ತರಿಗೆ ಅಡಚಣೆ ಮಾಡಿದ್ದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.

ಬರುವ ಭಕ್ತರಿಗೆ ಕುಡಿಯುವ ನೀರು, ನೆರಳು, ಸ್ವಚ್ಛತೆ, ಮೊಬೈಲ್ ಶೌಚಾಲಯಕ್ಕೆ ಒತ್ತು ನೀಡಬೇಕು ಎಂದು ಸೂಚಿಸಿದರು.

ಉಚ್ಚೆಂಗೆಮ್ಮ ದೇವಿ ಉಪ ಸನ್ನಿಧಿ, ಆನೆ ಹೊಂಡ, ಅರಶಿಣ ಹೊಂಡ, ಬಸ್ ನಿಲ್ದಾಣ, ತೋಪಿನ ಹಾಲಮ್ಮ ದೇವಿ ದೇವಸ್ಥಾನ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಸಂತೋಷ್ ಚೌಹಾಣ್, ವೃತ್ತ ನಿರೀಕ್ಷಕ ಮಹಾಂತೇಶ್ ಸಜ್ಜನ್, ಸಬ್ ಇನ್ಸ್ಪೆಕ್ಟರ್ ವಿಜಯ ಕೃಷ್ಣ ಸಿಬ್ಬಂದಿ ವಾಸುದೇವ ನಾಯ್ಕ, ಜಗದೀಶ್, ರವಿ ನಾಯ್ಕ, ಹರೀಶ್ ಮುಜರಾಯಿ ಇಲಾಖೆ ಸಿಬ್ಬಂದಿ ಟಿ. ಗಂಗಾಧರ, ನಾಗರಾಜ್ ಸೇರಿದಂತೆ ಇತರರು ಇದ್ದರು.

Edited By : Somashekar
PublicNext

PublicNext

24/01/2026 03:13 pm

Cinque Terre

22.98 K

Cinque Terre

0