ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಸಿ: ನೂತನ ಹೆಸ್ಕಾಂ ಶಾಖಾ ಕಚೇರಿ ಕಟ್ಟಡಕ್ಕೆ ಭೂಮಿಪೂಜೆ ಸಲ್ಲಿಸಿದ ಶಾಸಕ ಭೀಮಣ್ಣ ನಾಯ್ಕ

ಶಿರಸಿ: ತಾಲೂಕಿನ ಹುಲೇಕಲ್ ಭಾಗದ ಸಾರ್ವಜನಿಕರಿಗೆ ಮತ್ತು ವಿದ್ಯುತ್ ಗ್ರಾಹಕರಿಗೆ ಸುಸಜ್ಜಿತ ಸೇವೆ ಒದಗಿಸುವ ನಿಟ್ಟಿನಲ್ಲಿ, ಹುಲೇಕಲ್ ಗ್ರಾಮದಲ್ಲಿ ಹೆಸ್ಕಾಂ ನೂತನ ಶಾಖಾ ಕಚೇರಿ ಕಟ್ಟಡಕ್ಕೆ ಶನಿವಾರ ಶಾಸಕ ಭೀಮಣ್ಣ ನಾಯ್ಕ ಅವರು ಭೂಮಿಪೂಜೆ ನೆರವೇರಿಸಿದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಾಸಕರು ಸುಮಾರು 1 ಕೋಟಿ 99 ಲಕ್ಷ ರೂ.ಗಳ ಅಂದಾಜು ವೆಚ್ಚದಲ್ಲಿ ಈ ನೂತನ ಕಚೇರಿ ಕಟ್ಟಡ ನಿರ್ಮಾಣವಾಗುತ್ತಿದ್ದು, ಇದು ಈ ಭಾಗದ ಸಾರ್ವಜನಿಕರ ವಿದ್ಯುತ್ ಸಮಸ್ಯೆಗಳ ಶೀಘ್ರ ವಿಲೇವಾರಿ ಮತ್ತು ಇಲಾಖೆಯ ಕೆಲಸ ಕಾರ್ಯಗಳಿಗೆ ಹೆಚ್ಚಿನ ವೇಗ ನೀಡುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.

ಅಲ್ಲದೇ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಹಾಗೂ ನಾವು ಬದ್ಧವಾಗಿದ್ದೇವೆ. ಹುಲೇಕಲ್ ಭಾಗದ ಜನರಿಗೆ ಕಚೇರಿ ಕೆಲಸಗಳಿಗೆ ಅನುಕೂಲವಾಗುವಂತೆ ಆಧುನಿಕ ಸೌಲಭ್ಯವುಳ್ಳ ಕಟ್ಟಡವನ್ನು ಆದಷ್ಟು ಶೀಘ್ರದಲ್ಲೇ ನಿರ್ಮಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ್ ಗೌಡರು ಹುಲೇಕಲ್ ಗ್ರಾಪಂ ಅಧ್ಯಕ್ಷ ಖಾಶಿಂ ಇಬ್ರಾಹಿಂ ಸಾಬ್, ಗ್ರಾಪಂ ಸದಸ್ಯರು, ಹೆಸ್ಕಾಂ ಇಲಾಖೆ ಅಧಿಕಾರಿಗಳು, ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

24/01/2026 03:20 pm

Cinque Terre

18.2 K

Cinque Terre

0

ಸಂಬಂಧಿತ ಸುದ್ದಿ