ಹಾಸನ: "ನಮ್ಮ ಪಕ್ಷದಿಂದ ಬೆಳೆದು, ಅಧಿಕಾರ ಅನುಭವಿಸಿ, ಅದೇ ಪಕ್ಷಕ್ಕೆ ಮೋಸ ಮಾಡಿದವರಿಗೆ ಕಾಲವೇ ಉತ್ತರ ನೀಡಲಿದೆ," ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ನಗರದಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಕ್ಷಾಂತರ ಮಾಡಿದ ನಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
"ಕೆಲವರು ನಮ್ಮ ಪಕ್ಷದ ಸಿದ್ಧಾಂತಗಳ ಮೇಲೆ ಬೆಳೆದು, ಇಂದು ಸ್ವಾರ್ಥಕ್ಕಾಗಿ ಪಕ್ಷ ಬದಲಿಸಿದ್ದಾರೆ. ಇದು ಕೇವಲ ಪಕ್ಷಕ್ಕೆ ಮಾಡಿದ ದ್ರೋಹವಲ್ಲ, ಈ ಭಾಗದ ಜನತೆಗೆ ಮಾಡಿದ ಮೋಸ," ಎಂದು ನಿಖಿಲ್ ಅಸಮಾಧಾನ ವ್ಯಕ್ತಪಡಿಸಿದರು.
Kshetra Samachara
24/01/2026 04:05 pm
LOADING...