ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ : ಕೆಎಸ್‌ಆರ್‌ಟಿಸಿ ಬಸ್-ಆಟೋ ಡಿಕ್ಕಿ: ಗಾಯಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ ಎಸ್ಪಿ

ಚಿತ್ರದುರ್ಗ : ನಗರದ ಕೆ.ಎಸ್‌.ಆರ್‌.ಟಿ.ಸಿ ಡಿಪೋ ಸಮೀಪ KSRTC ಬಸ್ ಮತ್ತು ಲಗೇಜ್ ಆಟೋ ನಡುವೆ ಡಿಕ್ಕಿ ಸಂಭವಿಸಿದೆ. ಈ ಅಪಘಾತದಲ್ಲಿ ಆಟೋದಲ್ಲಿದ್ದ ಶಾಲಾ ಮಕ್ಕಳಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್ ಕುಮಾರ್ ಬಂಡಾರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅವರು ಜಿಲ್ಲಾಸ್ಪತ್ರೆಗೆ ತೆರಳಿ ಗಾಯಗೊಂಡಿದ್ದ ಮಕ್ಕಳ ಆರೋಗ್ಯದ ಬಗ್ಗೆ ವಿಚಾರಿಸಿದರು.

ಈ ಘಟನೆಗೆ ಸಂಬಂಧಿಸಿದಂತೆ ಚಿತ್ರದುರ್ಗ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Edited By : PublicNext Desk
Kshetra Samachara

Kshetra Samachara

25/01/2026 07:44 am

Cinque Terre

3.36 K

Cinque Terre

0

ಸಂಬಂಧಿತ ಸುದ್ದಿ