ಧರ್ಮಶಾಲಾ: ಹಿಮಾಚಲ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಹಿಮಪಾತದಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಮನಾಲಿ, ಶಿಮ್ಲಾ, ಕಾಲ್ಕಾ ಸೇರಿದಂತೆ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳು ಹಿಮದ ದಪ್ಪ ಪದರದಿಂದ ಆವೃತವಾಗಿವೆ. ಒಂದು ಕಡೆ ಪ್ರವಾಸಿಗರು ಹಿಮಪಾತದ ಸೌಂದರ್ಯವನ್ನು ಸವಿಯುತ್ತಿದ್ದರೆ, ಮತ್ತೊಂದೆಡೆ ತಮ್ಮ ಊರುಗಳಿಗೆ ಮರಳಲು ರಸ್ತೆಗಳಿಲ್ಲದೆ ಪರದಾಡುತ್ತಿದ್ದಾರೆ.
ಕುಲು ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಕೋಥಿ ಮತ್ತು ಮನಾಲಿಯತ್ತ ಸಾಗುವ ರಸ್ತೆಗಳು ವಾಹನಗಳಿಂದ ತುಂಬಿ ತುಳುಕುತ್ತಿವೆ. ಭಾರೀ ಹಿಮಪಾತದಿಂದಾಗಿ ಉಂಟಾಗಿರುವ ಟ್ರಾಫಿಕ್ ಜಾಮ್‌ನಿಂದಾಗಿ 8 ಕಿಲೋಮೀಟರ್‌ಗೂ ಹೆಚ್ಚು ಉದ್ದಕ್ಕೆ ವಾಹನಗಳು ರಸ್ತೆಯಲ್ಲೇ ನಿಂತಿವೆ.
ಮನಾಲಿಯ ಒಂದು ಭಾಗ ಹಿಮದಿಂದ ಆವೃತವಾಗಿದ್ದರೆ, ಮತ್ತೊಂದು ಭಾಗದಲ್ಲಿ ಜನದಟ್ಟಣೆ ಹೆಚ್ಚಾಗಿದೆ.
ಹಿಮಪಾತದ ಪರಿಣಾಮವಾಗಿ, ರಾಜ್ಯಾದ್ಯಂತ ಒಟ್ಟು 685 ರಸ್ತೆಗಳಲ್ಲಿ ಸಂಚಾರವನ್ನು ಬಂದ್ ಮಾಡಲಾಗಿದೆ. ಈ ಪೈಕಿ ಲಹೌಲ್ ಮತ್ತು ಸ್ಪಿತಿ ಜಿಲ್ಲೆಗಳಲ್ಲೇ 292 ರಸ್ತೆಗಳು ಮುಚ್ಚಲ್ಪಟ್ಟಿವೆ. ಇ
ದಲ್ಲದೆ, ಚಂಬಾದಲ್ಲಿ 132, ಮಂಡಿಯಲ್ಲಿ 126, ಕುಲುವಿನಲ್ಲಿ 79, ಸಿರ್ಮೌರ್‌ನಲ್ಲಿ 29, ಕಿನ್ನೌರ್‌ನಲ್ಲಿ 20, ಕಾಂಗ್ರಾದಲ್ಲಿ 4, ಉನಾದಲ್ಲಿ 2 ಮತ್ತು ಸೋಲನ್‌ನಲ್ಲಿ 1 ರಸ್ತೆಯಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
PublicNext
25/01/2026 10:24 am
LOADING...