ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ : ನಮ್ಮ ನೆಮ್ಮದಿ ಕಸಿಯಬೇಡಿ! ಜನವಸತಿ ಪ್ರದೇಶದಲ್ಲಿ ಮದ್ಯದಂಗಡಿ ಬೇಡ - ಗ್ರಾಮಸ್ಥರ ಪ್ರತಿಭಟನೆ

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಹಸಾಂಡಹಳ್ಳಿ ಗ್ರಾಮದಲ್ಲಿ, ಜನವಸತಿ ಪ್ರದೇಶಕ್ಕೆ ಮದ್ಯದ ಅಂಗಡಿ ಸ್ಥಳಾಂತರಕ್ಕೆ ಸ್ಥಳೀಯರು ನಿವಾಸಿಗಳು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ.

ಹಸಾಂಡಹಳ್ಳಿ ಗ್ರಾಮದಲ್ಲಿ ಮುಜರಾಯಿ ಇಲಾಖೆಗೆ ಸೇರಿದ ದೇಗುಲ, ಹಾಗೂ ಮಸೀದಿ ಹಾಗೂ ಸುತ್ತಲೂ ಮನೆಗಳಿದ್ದರೂ ಅಬಕಾರಿ ಇಲಾಖೆ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿ, ಬಾರ್ ತೆರೆಯಲು ಅನುಮತಿ ನೀಡಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ,

ಈ ಹಿನ್ನೆಲೆ ಅಬಕಾರಿ ಇಲಾಖೆಗೆ ಸ್ಥಳೀಯರು ದೂರು ನೀಡಿದ ಹಿನ್ನೆಲೆ, ಸ್ಥಳಕ್ಕೆ ಅಬಕಾರಿ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದರು, ಇನ್ನೂ ಇದೆ ವೇಳೆ ಮಾತನಾಡಿದ ಗ್ರಾಮಸ್ಥರು ಅಬಕಾರಿ ಇಲಾಖೆ ಅಧಿಕಾರಿಗಳು, ಬಾರ್ ಮಾಲೀಕರೊಂದಿಗೆ ಶಾಮೀಲಾಗಿ ಜನವಸತಿ ಪ್ರದೇಶಕ್ಕೆ ಬಾರ್, ಸ್ಥಳಾಂತರಕ್ಕೆ ಅನುಮತಿ ನೀಡಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Edited By : Manjunath H D
PublicNext

PublicNext

25/01/2026 04:48 pm

Cinque Terre

13.62 K

Cinque Terre

0

ಸಂಬಂಧಿತ ಸುದ್ದಿ