ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಮನಗರ: ಅರಣ್ಯ ಇಲಾಖೆ ವಿರುದ್ಧ ಜನರ ಪ್ರತಿಭಟನೆ

ರಾಮನಗರ: ಡಾಂಬರ್ ರಸ್ತೆ ನಿರ್ಮಾಣಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಆರೋಪಿಸಿ ಅರಣ್ಯ‌ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ‌ ನಡೆಸಿರೋ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಹಾರೋಹಳ್ಳಿ ತಾಲೂಕಿನ ಬೆಟ್ಟಹಳ್ಳಿ ಕಾವಲ್ ಬಳಿ ನಡೆದಿದೆ.

ಕಾಮಗಾರಿ ಸ್ಥಳದ ಬಳಿ ರಸ್ಥೆಯಲ್ಲೇ ಕುಳಿತು ಗ್ರಾಮಸ್ಥರು ಪ್ರತಿಭಟನೆ ನಡೆಸಿ, ಅರಣ್ಯ ‌ಇಲಾಖೆ ಅಧಿಕಾರಿಗಳ ವಿರೋಧ ಘೋಷಣೆ ‌ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅರಣ್ಯ ಇಲಾಖೆ ಜಾಗವೆಂದು ಅಧಿಕಾರಿಗಳು ಡಾಂಬರಿಕರಣಕ್ಕೆ ಅವಕಾಶ ನೀಡುತ್ತಿಲ್ಲವೆಂದು ಗ್ರಾಮಸ್ಥರು ಆರೋಪಿಸಿದರು.

Edited By : Manjunath H D
PublicNext

PublicNext

25/01/2026 05:14 pm

Cinque Terre

15.64 K

Cinque Terre

0