ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಅತ್ಯುತ್ತಮ ಚುನಾವಣಾ ಕಾರ್ಯನಿರ್ವಹಣೆ; ತುಮಕೂರು ಜಿಲ್ಲಾಧಿಕಾರಿಗೆ ಪ್ರಶಸ್ತಿ ಪ್ರದಾನ

ಬೆಂಗಳೂರು: ಚುನಾವಣಾ ಆಯೋಗವು ಅತ್ಯುತ್ತಮ ಚುನಾವಣಾ ಕಾರ್ಯನಿರ್ವಹಣೆಗೆ ನೀಡುವ ರಾಜ್ಯಮಟ್ಟದ ಪ್ರಶಸ್ತಿಗೆ ಬೆಂಗಳೂರು ವಿಭಾಗದಿಂದ ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ಆಯ್ಕೆಯಾಗಿದ್ದು, ಬೆಂಗಳೂರಿನಲ್ಲಿ ನಡೆದ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಈ ಹಿಂದೆ 2020ರಲ್ಲಿಯೂ ತುಮಕೂರು ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದಾಗ ಕೂಡ ಶುಭಕಲ್ಯಾಣ್ ಅವರು, ಚುನಾವಣಾ ಆಯೋಗದಿಂದ ಪ್ರಶಸ್ತಿ ಪಡೆದಿದ್ದರು. ಇದೀಗ ಈ ಜಿಲ್ಲೆಯಲ್ಲಿ ಇದು ಎರಡನೇ ಬಾರಿಗೆ ಪ್ರಶಸ್ತಿ ಸ್ವೀಕರಿಸಿದ್ದಾರೆ ಎಂಬುದು ಗಮನಾರ್ಹ. ಇನ್ನು ಚುನಾವಣೆಯಲ್ಲಿ ಜಿಲ್ಲಾಧಿಕಾರಿಗಳ ಮಾರ್ಗದರ್ಶ‌ನದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿದ ಹಿನ್ನಲೆಯಲ್ಲಿಈ ಪ್ರಶಸ್ತಿ ಲಭಿಸಿದೆ ಎಂದ ಜಿಲ್ಲಾಧಿಕಾರಿ ಶುಭಕಲ್ಯಾಣ್, ಈ ಪ್ರಶಸ್ತಿ ಸಿಗಲು ಕಾರಣಕರ್ತರಾದ ಎಲ್ಲಾ ಜಿಲ್ಲೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಧನ್ಯವಾದ ತಿಳಿಸಿದ್ದಾರೆ.‌

Edited By : Vinayak Patil
PublicNext

PublicNext

26/01/2026 07:18 am

Cinque Terre

15.39 K

Cinque Terre

0