ಬಾಗಲಕೋಟೆ: ಮುಧೋಳ ನಗರದ ಹೋಟೆಲ್ ಗಳಿಗೆ ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಅಧಿಕಾರಿಗಳ ತಂಡ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಈ ವೇಳೆ ಸ್ವಚ್ಛತೆ ಕಾಪಾಡದ ಹೋಟೆಲ್ ಮಾಲೀಕರನ್ನು ತರಾಟೆಗೆ ತೆಗೆದುಕೊಂಡ್ರು. ಬಳಿಕ ನಗರದ ವಿವಿಧ ಕಡೆಗಳಲ್ಲಿ ಸಾರ್ವಜನಿಕ ಶೌಚಾಲಯ ಸ್ವಚ್ಛತೆ ಪರಿಶೀಲಿಸಿ, ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ್ರು. ಸಾರ್ವಜನಿಕ ಶೌಚಾಲಯ ಅವ್ಯವಸ್ಥೆ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ್ರು. ಖಾಸಗಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಎಚ್ಚರಿಕೆ ನೀಡಿದ್ರು. ಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ ಅವರೊಂದಿಗೆ ಸ್ಥಳೀಯ ಅಧಿಕಾರಿಗಳು ಸಾಥ್ ನೀಡಿದ್ರು.
Kshetra Samachara
26/01/2026 08:40 am
LOADING...