ಮಡಿಕೇರಿ: ನಾಡಿನೆಲ್ಲೆಡೆ 77ನೇ ಗಣರಾಜ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಕೊಡಗು ಜಿಲ್ಲೆಯಲ್ಲೂ ಈ ರಾಷ್ಟ್ರೀಯ ಹಬ್ಬವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ ಮುಖ್ಯ ಕಾರ್ಯಕ್ರಮದಲ್ಲಿ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಿದರು.
ಪಥಸಂಚಲನ ಮತ್ತು ಗೌರವ ನಮನ
ಧ್ವಜಾರೋಹಣದ ಬಳಿಕ ಸಚಿವರು ಪಥಸಂಚಲನವನ್ನು ಪರಿವೀಕ್ಷಿಸಿದರು. ಜಿಲ್ಲಾ ಸಶಸ್ತ್ರ ಮೀಸಲುಪಡೆ, ಅರಣ್ಯ ಇಲಾಖೆ, ಎನ್.ಸಿ.ಸಿ. ವಿದ್ಯಾರ್ಥಿಗಳು, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಗೌರವ ನಮನ ಸಲ್ಲಿಸಲಾಯಿತು.
ಗಣ್ಯರ ಉಪಸ್ಥಿತಿ
ಈ ಮಹತ್ವದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಎಸಿ ಐಶ್ವರ್ಯ, ನಗರಸಭಾ ಅಧ್ಯಕ್ಷೆ ಕಲಾವತಿ, ರಾಜ್ಯ ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ಮೇರೋಜ್ ಖಾನ್ ಸೇರಿದಂತೆ ಹಲವು ಗಣ್ಯ ಅತಿಥಿಗಳು ಉಪಸ್ಥಿತರಿದ್ದರು.
Kshetra Samachara
26/01/2026 09:42 am
LOADING...