ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯನಗರ ಜಿಲ್ಲೆಯಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ - ದೇಶಭಕ್ತಿಯ ಕಹಳೆ ಮೊಳಗಿಸಿದ ಸಚಿವ ಜಮೀರ್!

ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಪುನೀತ್ ರಾಜ್‌ಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವದ ಸಂಭ್ರಮಾಚರಣೆ ಕಳೆಗಟ್ಟಿತ್ತು. ಈ ಸಂದರ್ಭದಲ್ಲಿ, ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ಧ್ವಜಾರೋಹಣ ನೆರವೇರಿಸಿದರು.

ಆಕರ್ಷಕ ಪಥಸಂಚಲನ ಮತ್ತು ಗಣ್ಯರ ಉಪಸ್ಥಿತಿ

ಧ್ವಜಾರೋಹಣದ ಬಳಿಕ, ಪೊಲೀಸ್ ಪಡೆ, ಸ್ಕೌಟ್ಸ್ ಅಂಡ್ ಗೈಡ್ಸ್ ಹಾಗೂ ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಈ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕುರಿ ಶಿವಮೂರ್ತಿ, ಇಮಾಮ್, ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೊಂಗ್ಜಾಯ್ ಅಕ್ರಂ ಷಾ, ಅಪರ ಜಿಲ್ಲಾಧಿಕಾರಿ ಬಾಲಕೃಷ್ಣ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.

Edited By :
PublicNext

PublicNext

26/01/2026 12:02 pm

Cinque Terre

13.88 K

Cinque Terre

0

ಸಂಬಂಧಿತ ಸುದ್ದಿ