ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆಯಲ್ಲಿ ರಾಷ್ಟ್ರಗೌರವದ ಗಣರಾಜ್ಯೋತ್ಸವ: ಪೊಲೀಸರಿಂದ ದೇಶಾಭಿಮಾನದ ಆಚರಣೆ

ದಾವಣಗೆರೆ: ದಾವಣಗೆರೆ ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ ಐಪಿಎಸ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕಚೇರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಐಜಿಪಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಎಲ್ಲ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ 77ನೇ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು.

ನೂತನ ಪೀಕ್ ಕ್ಯಾಪ್ ವಿತರಣೆ

ಇದೇ ವೇಳೆ, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಹಾಗೂ ಹೆಡ್‌ ಕಾನ್ಸ್‌ಟೇಬಲ್ ಹಂತದ ಸಿಬ್ಬಂದಿಗೆ ನೂತನವಾಗಿ ಜಾರಿಗೆ ತಂದಿದ್ದ ಸ್ಲೋಚ್ ಹ್ಯಾಟ್ ಬದಲಾಗಿ, ಪೀಕ್ ಕ್ಯಾಪ್‌ಗಳನ್ನು ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ ಅವರು ಸಿಬ್ಬಂದಿಗೆ ಸಾಂಕೇತಿಕವಾಗಿ ವಿತರಿಸಿದರು.

Edited By : Vijay Kumar
PublicNext

PublicNext

26/01/2026 12:07 pm

Cinque Terre

6.8 K

Cinque Terre

0