ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಾದಗಿರಿಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ: ಸಚಿವ ದರ್ಶನಾಪೂರರಿಂದ ಧ್ವಜಾರೋಹಣ

ಯಾದಗಿರಿ: ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 77ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಅವರು ಗೌರವ ವಂದನೆ ಸ್ವೀಕರಿಸಿದರು.

ಆಕರ್ಷಕ ಪಥಸಂಚಲನ ಹಾಗೂ ಗಣ್ಯರ ಉಪಸ್ಥಿತಿ

ಈ ಸಂದರ್ಭದಲ್ಲಿ ಪೊಲೀಸರು ಮತ್ತು ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. 15ಕ್ಕೂ ಹೆಚ್ಚು ತಂಡಗಳು ಪಥಸಂಚಲನದಲ್ಲಿ ಭಾಗವಹಿಸಿ ಮೆರುಗು ನೀಡಿದವು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ವಿರೋಧಪಕ್ಷದ ನಾಯಕ ನಾರಾಯಣಸ್ವಾಮಿ, ಬಾಬುರಾವ್ ಚಿಂಚನಸೂರ, ಶಾಸಕ ಚೆನ್ನಾರಡ್ಡಿ ಪಾಟೀಲ್, ಜಿಲ್ಲಾಧಿಕಾರಿ ಹರ್ಷಲ್ ಬೋಯರ್, ಸಿಇಒ ಲವೀಶ ಒರಾಡಿಯಾ, ಎಸ್ಪಿ ಪೃಥ್ವಿಕ್ ಶಂಕರ್ ಸೇರಿದಂತೆ ಹಲವು ಅಧಿಕಾರಿಗಳು ಮತ್ತು ಗಣ್ಯರು ಉಪಸ್ಥಿತರಿದ್ದರು.

Edited By : Vinayak Patil
PublicNext

PublicNext

26/01/2026 12:11 pm

Cinque Terre

10.99 K

Cinque Terre

0