ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: 77 ನೇ ಗಣರಾಜ್ಯೋತ್ಸವ ದಿನಾಚರಣೆ, ಧ್ವಜಾರೋಹಣ ನೆರವೇರಿಸಿದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

ದಾವಣಗೆರೆ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವದಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ನೆರವೇರಿಸಿದ್ರು. ನಂತರ ಜಿಲ್ಲೆಯ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ನಮ್ಮ ದೇಶವು 1947ರಲ್ಲಿ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರವಾಯಿತು. ಆದರೆ 1950ರ ಜನವರಿ 26 ರಂದು ಸಂವಿಧಾನ ಜಾರಿಗೆ ಬರುವ ಮೂಲಕ ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂಬ ಹೆಮ್ಮೆಗೆ ಪಾತ್ರವಾಯಿತು. ಡಾ. ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನವು ನಮಗೆ ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯವನ್ನು ನೀಡಿದೆ ಎಂದರು.

ಜಿಲ್ಲೆಯಲ್ಲಿ ಜಾರಿಯಾಗಿರುವ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಅಂಕಿ-ಅಂಶಗಳೊಂದಿಗೆ ಹಂಚಿಕೊಂಡರು. ಇನ್ನು ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ಇದುವರೆಗೆ 12.30 ಕೋಟಿ ಮಹಿಳೆಯರು ಪ್ರಯಾಣಿಸಿದ್ದು, ಇವರ ಟಿಕೆಟ್ ವೆಚ್ಚ 361.67 ಕೋಟಿ ರೂ. ಮೊತ್ತವನ್ನು ಸರ್ಕಾರ ಭರಿಸಿದೆ ಎಂದರು. ಹಾಗೆ ಜಿಲ್ಲೆಯ 3.74 ಲಕ್ಷ ಮನೆ ಯಜಮಾನಿಯರ ಖಾತೆಗೆ ಮಾಸಿಕ 2 ಸಾವಿರದಂತೆ ಒಟ್ಟು 1690 ಕೋಟಿ ರೂ. ಜಮಾ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ 13.95 ಲಕ್ಷ ಫಲಾನುಭವಿಗಳು ಲಾಭ ಪಡೆಯುತ್ತಿದ್ದು, ಫೆಬ್ರವರಿ 2025 ರಿಂದ ನಗದು ಬದಲಾಗಿ ಅಕ್ಕಿ ನೀಡಲಾಗುತ್ತಿದೆ ಎಂದರು.

ಜಿಲ್ಲೆಯ ಪ್ರಮುಖ ಮೈಲಿಗಲ್ಲುಗಳು

ಕಂದಾಯ ಕ್ರಾಂತಿ: ಜಿಲ್ಲೆಯ 1.30 ಲಕ್ಷ ಭೂ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಹಾವೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲೆಯ 10 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗುವುದು.

ಕುಡಿಯುವ ನೀರು: ಜಿಲ್ಲೆಯ 62 ಗ್ರಾಮಗಳು 24*7 ನೀರು ಪೂರೈಕೆ ಗ್ರಾಮಗಳೆಂದು ಘೋಷಿಸಲ್ಪಟ್ಟಿವೆ. ದಾವಣಗೆರೆ ನಗರ ಭಾಗದಲ್ಲಿ ಏಪ್ರಿಲ್ 2026ರೊಳಗೆ ಎಲ್ಲರಿಗೂ ನಿರಂತರ ನೀರು ಒದಗಿಸಲಾಗುವುದು ಎಂದರು.

Edited By :
Kshetra Samachara

Kshetra Samachara

26/01/2026 01:00 pm

Cinque Terre

15.65 K

Cinque Terre

0