ಮೊಳಕಾಲ್ಮುರು: 77ನೇ ಗಣರಾಜ್ಯೋತ್ಸವವನ್ನು ತಾಲ್ಲೂಕು ಆಡಳಿತದ ವತಿಯಿಂದ ಸೋಮವಾರದಂದು ಪಟ್ಟಣದ ಜೂನಿಯರ್ ಕಾಲೇಜು ಆವರಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಶಾಸಕ ಎನ್ ವೈ ಗೋಪಾಲಕೃಷ್ಣ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಪೊಲೀಸ್ ವೃಂದದಿಂದ ಗೌರವ ವಂದನೆ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಗಣರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸರ್ಕಾರಿ ನೌಕರರಿಗೆ ಗೌರವಿಸಲಾಯಿತು.
ಶಾಸಕ ಎನ್ ವೈ ಗೋಪಾಲಕೃಷ್ಣ ಮಾತನಾಡಿ,ಬ್ರಿಟೀಷರಿಂದ ಸ್ವಾತಂತ್ರ್ಯ ಪಡೆದ ಬಳಿಕ ನಮ್ಮ ರಾಷ್ಟ್ರ ತನ್ನದೇ ಆದ ಪ್ರಜಾಸತ್ತಾತ್ಮಕ ಗಣತಂತ್ರ ವ್ಯವಸ್ಥೆಯನ್ನು ರೂಢಿಸಿಕೊಂಡು ಸಂವಿಧಾನವನ್ನು ಜಾರಿಗೆ ತಂದ ದಿನವನ್ನು ನಾವು ಗಣರಾಜ್ಯೋತ್ಸವವಾಗಿ ಆಚರಿಸುತ್ತಿದ್ದೇವೆ ಎಂದರು. ಸಂವಿಧಾನ ರಚನೆ ಮಾಡುವಲ್ಲಿ ಡಾ.ಬಿಆರ್ ಅಂಬೇಡ್ಕರ್ ಪಾತ್ರ ಬಹಳ ಮಹತ್ವದ್ದು, ಪ್ರಪಂಚದಲ್ಲಿಯೇ ಅತಿ ದೊಡ್ಡ ಸಂವಿಧಾನವನ್ನು ನೀಡಿದ ಡಾ. ಬಿಆರ್ ಅಂಬೇಡ್ಕರ್ ಅವರನ್ನು ಸ್ಮರಿಸುವ ಸುದಿನ ಈ ದಿನ ಎಂದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ ಜಗದೀಶ್,ಬಿಇಓ ನಿರ್ಮಲಾದೇವಿ,ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಲಿಂಗರಾಜ,ಸಿಪಿಐ ನಾಗರಾಜ್,ಪಿಎಸ್ಐ ಮಹೇಶ್ ಲಕ್ಷ್ಮಣ ಹೊಸಪೇಟೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ನಾನಾ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕರು ಇದ್ದರು.
Kshetra Samachara
26/01/2026 03:56 pm
LOADING...