ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಾಲೂಕು ಆಡಳಿತ ವತಿಯಿಂದ 77 ನೇ ಗಣರಾಜ್ಯೋತ್ಸವ ಆಚರಣೆ

ಗದಗ : ಲಕ್ಷ್ಮೇಶ್ವರ ತಾಲೂಕು ಆಡಳಿತ ವತಿಯಿಂದ 77 ನೇ ಗಣರಾಜ್ಯೋತ್ಸವನ್ನು ತಹಶೀಲ್ದಾರ ಧನಂಜಯವರು ಧ್ವಜಾರೋಹಣ ಮಾಡುವ ಮೂಲಕ ಆಚರಣೆ ಮಾಡಿದರು.

ಅವರು ಮಾತನಾಡಿ ಭಾರತದಲ್ಲಿ ಪ್ರಜಾಪ್ರಭುತ್ವ ಉದಯವಾದ ಐತಿಹಾಸಿಕ ದಿನವಾದ ಜನವರಿ 26 ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ದಿನವಾಗಿದೆ ಗಣರಾಜ್ಯೋತ್ಸವವು ಅಧಿಕಾರವು ಯಾವುದೇ ವ್ಯಕ್ತಿ, ರಾಜ ಅಥವಾ ಸರ್ಕಾರಕ್ಕೆ ಸೇರಿಲ್ಲ, ಬದಲಾಗಿ ಸಂವಿಧಾನ ಮತ್ತು ಜನರಿಗೆ ಸೇರಿದೆ ಎಂಬುದನ್ನು ನಮಗೆ ನೆನಪಿಸುತ್ತದೆ. ಈ ದಿನವು ಹಕ್ಕುಗಳನ್ನು ಆಚರಿಸುತ್ತದೆ, ಜೊತೆಗೆ ನಮ್ಮ ಕರ್ತವ್ಯಗಳನ್ನು ಸಹ ನೆನಪಿಸುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಿಎಸ್ಐ ನಾಗರಾಜ ಗಡದ,ಗ್ರೇಟ್ 2 ತಹಶೀಲ್ದಾರ ಅಮವಾಸ್ಯೆ, ಪಂಚಗ್ಯಾರಂಟಿ ಅಧ್ಯಕ್ಷ ನಾಗರಾಜ ಮಡಿವಾಳರ, ಈಶ್ವರ ಮೇಡ್ಲೇರಿ, ಟಾಕಪ್ಪ ಸಾತಪೂತೆ,ಶ್ರೀಕಾಂತ ನವಲೆ, ಚಂದ್ರಶೇಖರ ನರಸಮ್ಮನವರ ಕೃಷ್ಣಪ್ಪ ಧರ್ಮರ್,ಹಾಗೂ ತಾಲೂಕ ಆಡಳಿತ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Edited By : PublicNext Desk
Kshetra Samachara

Kshetra Samachara

26/01/2026 04:04 pm

Cinque Terre

5.7 K

Cinque Terre

0

ಸಂಬಂಧಿತ ಸುದ್ದಿ