ಮಂಚೇನಹಳ್ಳಿ: ತಾಲ್ಲೂಕಿನ ಸರ್ಕಾರಿ ಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ಸಮಾರಂಭದಲ್ಲಿ ಭಾರೀ ಎಡವಟ್ಟು ಸಂಭವಿಸಿದೆ. ತಹಶೀಲ್ದಾರ್ ಪೂರ್ಣಿಮಾ ಅವರು ಧ್ವಜಾರೋಹಣ ನೆರವೇರಿಸುವ ಸಂದರ್ಭದಲ್ಲಿ ರಾಷ್ಟ್ರಧ್ವಜವು ತಲೆಕೆಳಗಾಗಿ ಹಾರಿದೆ.
ಸಾರ್ವಜನಿಕರ ಆಕ್ರೋಶ
ಶಾಲಾ ಸಿಬ್ಬಂದಿಯ ಅಜಾಗರೂಕತೆಯಿಂದ ಈ ಘಟನೆ ನಡೆದಿದೆ. ರಾಷ್ಟ್ರಧ್ವಜ ತಲೆಕೆಳಗಾಗಿ ಹಾರಿದ್ದರೂ, ರಾಷ್ಟ್ರಗೀತೆ ಹಾಡಲು ಮುಂದಾದ ಸಿಬ್ಬಂದಿಯ ನಡೆಯು ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ್ದಲ್ಲದೆ, ಸ್ಥಳೀಯ ನಾಗರಿಕರ ತೀವ್ರ ಆಕ್ರೋಶಕ್ಕೆ ಕಾರಣವಾಯಿತು. ತಕ್ಷಣವೇ ಎಚ್ಚೆತ್ತ ಸಿಬ್ಬಂದಿ, ರಾಷ್ಟ್ರಗೀತೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ, ಧ್ವಜವನ್ನು ಸರಿಪಡಿಸಿದರು. ಈ ಘಟನೆ ತಾಲ್ಲೂಕಿನಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
PublicNext
26/01/2026 04:09 pm
LOADING...