ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಸಿ: ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರು, ಕ್ರಾಂತಿಕಾರರ ತ್ಯಾಗದ ಫಲದಿಂದ ನಾವು ಸಂತೋಷವಾಗಿ ಬದುಕ್ತಿದ್ದೇವೆ- ಚಂದ್ರಶೇಖರ್ ಆರ್.ಜಿ.

ಶಿರಸಿ: ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರ ಮತ್ತು ಕ್ರಾಂತಿಕಾರರ ತ್ಯಾಗದ ಫಲವಾಗಿ ನಾವು ಸಂತೋಷವಾಗಿ ಬದುಕುತ್ತಿದ್ದೇವೆ. ಅದಕ್ಕೆ ಕಾರಣ ಡಾ.ಬಿ ಆರ್ ಅಂಬೇಡ್ಕರ್ ಅವರು ಜಗತ್ತಿನಲ್ಲಿಯೇ ಅತ್ಯಂತ ವಿಸ್ತಾರವಾದ ಸಂವಿಧಾನವನ್ನು ರಚಿಸಿ ನಮ್ಮ ದೇಶಕ್ಕೆ ಅರ್ಪಣೆ ಮಾಡಿದ್ದಾರೆ. ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಭಾರತೀಯ ನಾಗರಿಕರಾದ ನಮ್ಮೆಲ್ಲರ ಹೊಣೆಯಾಗಿದೆ ಎಂದು ಶಿರಸಿ ಉಪವಿಭಾಗಾಧಿಕಾರಿ ಆರ್ ಜಿ ಚಂದ್ರಶೇಖರ್ ಹೇಳಿದರು.

ಅವರು ಜನವರಿ 26 ರಂದು ಸೋಮವಾರ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ 77 ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಿರಸಿ- ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶಗೌಡ, ಎಸ್ ಕೆ ಭಾಗ್ವತ, ಎಸಿ ಚಂದ್ರಶೇಖರ ಆರ್ ಜಿ, ತಹಶೀಲ್ದಾರ ಪುಟ್ಟರಾಜಗೌಡ, ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ್, ನಗರ ಸಭೆ ಪೌರಾಯುಕ್ತ ಪ್ರಕಾಶ ಚನ್ನಪ್ಪನವರ, ತಾಪಂ ಇಓ ಚನ್ನಬಸಪ್ಪ ಹಾವಣಗಿ, ಪಿಆರ್ ಇ ಶಿರಸಿ ವಿಭಾಗದ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್ ಜಾಗೀರದಾರ, ಹಿರಿಯ ನಾಗರಿಕರು, ಖಾದರ್ ಆನವಟ್ಟಿ,ಶ್ರೀಮತಿ ಶಮಿಮಭಾನು ಶಿಕಾರಿಪುರ, ವಿವಿಧ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಅನೇಕರು ಇದ್ದರು.

Edited By : Manjunath H D
PublicNext

PublicNext

26/01/2026 04:42 pm

Cinque Terre

15.83 K

Cinque Terre

0

ಸಂಬಂಧಿತ ಸುದ್ದಿ