ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಸಡಗರ ಸಂಭ್ರಮದ ಗಣರಾಜ್ಯೋತ್ಸವ ದಿನಾಚರಣೆ

ವಿಜಯಪುರ: ಗಣರಾಜ್ಯೋತ್ಸವ ದಿನಾಚರಣೆಯನ್ನು ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಯಿತು.

ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ರಾಷ್ಟ್ರಧ್ವಜಾರೋಹಣ ನೆರವೇರಿಸಿ,ನಂತರ ಧ್ವಜವಂದನೆ ಸ್ವೀಕರಿಸಿ,ತೆರೆದ ವಾಹನದಲ್ಲಿ ಪೆರೇಡ್ ತಂಡಗಳ ಪರಿವೀಕ್ಷಣೆ ನಡೆಸಿದರು.

ಈ ಸಂದರ್ಭದಲ್ಲಿ ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯ್ಕ, ಮಹಾನಗರ ಪಾಲಿಕೆಯ ಮಹಾಪೌರ ಎಂ.ಎಸ್.ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನಾನ್ ಮುಶ್ರಿಫ್,ಜಿಲ್ಲಾಧಿಕಾರಿ ಡಾ.ಆನಂದ.ಕೆ,ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ,ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ್ ಸೇರಿದಂತೆ ವಿವಿಧ ಜನಪ್ರತಿನಿಧಿಗಳು,ಜಿಲ್ಲಾ ಮಟ್ಟದ

ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Shivu K
PublicNext

PublicNext

26/01/2026 05:18 pm

Cinque Terre

17.91 K

Cinque Terre

0