ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿ. ಎಂ. ರಸ್ತೆಯಲ್ಲಿ ಬಸ್ - ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಯುವಕರಿಗೆ ಗಂಭೀರ ಗಾಯ

ಹಾಸನ: ನಗರದ ಪ್ರಮುಖ ರಸ್ತೆಯಾದ ಬಿ.ಎಂ. ರಸ್ತೆಯ ಮಲಬಾರ್ ಗೋಲ್ಡ್ ತಿರುವಿನ ಬಳಿ ಮಂಗಳವಾರ ಬೆಳಗಿನ ಜಾವ ಖಾಸಗಿ ಸ್ಲೀಪರ್ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ತೀವ್ರವಾಗಿ ಗಾಯಗೊಂಡಿದ್ದಾರೆ.

ಮಂಗಳವಾರ ಬೆಳಗಿನ ಜಾವ ಸುಮಾರು 2:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಅತಿ ವೇಗವಾಗಿ ಬಂದ ಖಾಸಗಿ ಸ್ಲೀಪರ್ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿಯಾಗಿದ್ದು, ಡಿಕ್ಕಿಯ ತೀವ್ರತೆಗೆ ದ್ವಿಚಕ್ರ ವಾಹನವು ಸಂಪೂರ್ಣವಾಗಿ ಬಸ್ಸಿನ ಮುಂಭಾಗದ ಅಡಿಗೆ ಸಿಲುಕಿಕೊಂಡಿದೆ.ಅಪಘಾತದ ಭೀಕರ ಸದ್ದು ಕೇಳುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಮತ್ತು ಸಾರ್ವಜನಿಕರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಬಸ್ಸಿನ ಅಡಿಯಲ್ಲಿ ಸಿಲುಕಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕರನ್ನು ಹರಸಾಹಸ ಪಟ್ಟು ಹೊರತೆಗೆದ ಸ್ಥಳೀಯರು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

Edited By :
Kshetra Samachara

Kshetra Samachara

27/01/2026 12:36 pm

Cinque Terre

2.2 K

Cinque Terre

0

ಸಂಬಂಧಿತ ಸುದ್ದಿ