ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳ್ಳಕೆರೆ: ಶಾಲೆಗೆ ಖಾತೆಯಿಲ್ಲದೆ 20 ವರ್ಷ ಕಳೆದರು ಶಿಕ್ಷಣ ಇಲಾಖೆ ಮೌನ, ಅಭಿವೃದ್ಧಿ ಮರೀಚಿಕೆ

ಚಳ್ಳಕೆರೆ: ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳ ಉಳಿವಿಗಾಗಿ ಸಾಕಷ್ಟು ಅನುದಾನ ಬಿಡುಗಡೆ ಮಾಡುತ್ತಿದ್ದರು ಇಲೊಂದು ಸರ್ಕಾರಿ ಶಾಲೆ ಮೂಲಭೂತ ಸೌಲಭ್ಯವಿಲ್ಲದೆ ಸೊರಗುತ್ತಿದೆ. ಸರ್ಕಾರಿ ಗೋಮಾಳದ ಜಾಗದಲ್ಲಿ ಕಳೆದ 20 ವರ್ಷಗಳಿಂದ ಸರ್ಕಾರಿ ಶಾಲೆ ನಿರ್ಮಿಸಿಕೊಂಡು ಶಾಲೆಯಲ್ಲಿ ತರಗತಿಗಳು ನಿರಂತರವಾಗಿ ನಡೆಯುತ್ತಿದ್ದರು ಸಹ ಇಂತಹ ಶಾಲೆಗೆ ಖಾತೆಯಿಲ್ಲದೆ ಅಭಿವೃದ್ಧಿ ಮರೀಚಿಕೆಯಾಗಿದ್ದು ಬಡ ಕುಟುಂಬದ ಮಕ್ಕಳ ಭವಿಷ್ಯ ಕತ್ತಲೆ ಬದುಕಿಗೆ ತಳ್ಳುತ್ತಿದ್ದು ಇಂತಹ ಶಾಲೆಯೊಂದು ಬೆಳಕಿಗೆ ಬಂದಿದೆ.

ತಾಲೂಕಿನ ನಗರಂಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಕ್ಷ್ಮೀಪುರ ಗ್ರಾಮದಲ್ಲಿ ಸರ್ಕಾರಿ ಗೋಮಾಳ ಜಾಗದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಾರಂಭವಾಗಿ 20 ವರ್ಷಗಳು ಕಳೆದರು ಸಹ ಶಿಕ್ಷಣ ಇಲಾಖೆ, ಸ್ಥಳೀಯ ಆಡಳಿತ,ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ, ಶಾಲೆಗೆ ಅಗತ್ಯ ದಾಖಲೆಗಳು ಇಲ್ಲದ ಪರಿಣಾಮವಾಗಿ ಶಾಲೆಯ ಸುತ್ತಲೂ ಕಾಂಪೌಂಡ್ ನಿರ್ಮಾಣ, ಶೌಚಾಲಯ, ಕುಡಿಯುವ ನೀರು, ಸಮರ್ಪಕ ಆಟದ ಮೈದಾನ ಸೇರಿದಂತೆ ಯಾವುದೇ ಮೂಲಭೂತ ಸೌಲಭ್ಯಗಳು ಒದಗಿಲ್ಲ.

ಶಾಲಾ ಆವರಣ ಮುಕ್ತವಾಗಿರುವುದರಿಂದ ವಿಷಜಂತುಗಳಾದ, ಹಾವು ಚೇಳು–ವಿಷದ ಹುಳಗಳ ಭೀತಿ ಶಿಕ್ಷಕರು ವಿದ್ಯಾರ್ಥಿಗಳನ್ನು ಸದಾ ಕಾಡುತ್ತಿದೆ. ಇದರಿಂದ ಮಕ್ಕಳ ಪೋಷಕರಲ್ಲಿ ಆತಂಕ ಹೆಚ್ಚಾಗಿದ್ದು, ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳ ಕಡೆಗೆ ಕಳುಹಿಸುವಂತಾಗಿದೆ. ಇದರ ಪರಿಣಾಮವಾಗಿ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಇಳಿಕೆಯಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ 23 ಮಕ್ಕಳು ವ್ಯಾಸಾಂಗ ಮಾಡುತ್ತಿದ್ದು ,ಇದೇ ತರಹ ಮುಂದುವರಿದರೆ ಸರ್ಕಾರಿ ಶಾಲೆಯನ್ನು ಮುಚ್ಚುವ ಸ್ಥಿತಿ ಬರುತ್ತದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

Edited By : Shivu K
PublicNext

PublicNext

27/01/2026 04:36 pm

Cinque Terre

9.56 K

Cinque Terre

0

ಸಂಬಂಧಿತ ಸುದ್ದಿ