ಚಿತ್ರದುರ್ಗ .ಜ.27:ಕೋಟೆನಾಡು ಚಿತ್ರದುರ್ಗದಲ್ಲಿ ಶಿಕ್ಷಣ ಕ್ಷೇತ್ರದ ಗುಣಮಟ್ಟ ಸುಧಾರಿಸಲು ಜಾರಿಗೆ ತರಲಾದ “ಎಡ್ ಲ್ಯಾಬ್” ಜಿಲ್ಲೆಯ ಶೈಕ್ಷಣಿಕ ಚಿತ್ರಣ ಬದಲಿಸುವಲ್ಲಿ ಮಹತ್ವ ಪಾತ್ರ ವಹಿಸಿದ್ದು, ರಾಜ್ಯದ ಗಮನ ಸೆಳೆದಿದೆ.
ಚಿತ್ರದುರ್ಗ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಸೋಮವಾರ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್, ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು “ಎಡ್ ಲ್ಯಾಬ್ ಹಾಗೂ ಡಿಜಿಟಲ್ ಕೊಠಡಿ” ಉದ್ಘಾಟಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಮಾತನಾಡಿ, ಸುಮಾರು 18 ಲಕ್ಷ ಜನಸಂಖ್ಯೆ ಹೊಂದಿರುವ ಚಿತ್ರದುರ್ಗ ಜಿಲ್ಲೆಯ ಶೈಕ್ಷಣಿಕ ಹಿನ್ನಡೆ ಹೋಗಲಾಡಿಸಿ, ಶಿಕ್ಷಣದ ಗುಣಮಟ್ಟ ಸುಧಾರಿಸಲು “ಎಡ್ ಲ್ಯಾಬ್” ಆಶಾದಾಯಕ ಬದಲಾವಣೆ ತರುತ್ತಿದೆ ಎಂದು ಹೇಳಿದರು.
ಕಳೆದ ವರ್ಷದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಜಿಲ್ಲೆಯು ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳಲ್ಲಿ 23ನೇ ಸ್ಥಾನಕ್ಕೆ ಪಡೆದಿರುತ್ತದೆ. ಪ್ರಥಮ್ ಸಂಸ್ಥೆಯವರು ನಡೆಸುವಂತಹ ಅಸರ್ 2025 ರ ವರದಿಯ ಪ್ರಕಾರ, ಜಿಲ್ಲೆಯ 6 ರಿಂದ 8 ನೇ ತರಗತಿಯ ಮಕ್ಕಳಲ್ಲಿ ಕೇವಲ ಶೇ.48.8ರಷ್ಟು ಮಕ್ಕಳಿಗೆ ಮಾತ್ರ 2ನೇ ತರಗತಿಯ ಪಠ್ಯ ಓದಲು ಬರುತ್ತಿದ್ದು, ಕೇವಲ ಶೇ.36.5 ಮಕ್ಕಳಿಗೆ ಮಾತ್ರ ಎರಡಂಕಿ ಗಣಿತದ ಜ್ಞಾನವಿರುವುದು ವರದಿಯಾಗಿತ್ತು. ಈ ಶೋಚನೀಯ ಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ “ಎಡ್ ಲ್ಯಾಬ್' ಕಾರ್ಯಾರಂಭ ಮಾಡಿತು ಎಂದು ಮಾಹಿತಿ ನೀಡಿದರು..
Kshetra Samachara
27/01/2026 06:49 pm
LOADING...